28.2 C
Mumbai
August 6, 2026
Mumbai News Kannada
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/08/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ





ವಿಶ್ವ :

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕೊನೆಯ ಸಂದೇಶ ಕಳುಹಿಸಿದ್ದು, ಸಂಪೂರ್ಣ ಶರಣಾಗತಿ ಅಥವಾ ಒಪ್ಪಂದಕ್ಕೆ ಬರಲು ಗಡುವು ನೀಡಿದ್ದಾರೆ. ಇದರ ನಡುವೆಯೇ ಕೆಂಪು ಸಮುದ್ರ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಅಮೆರಿಕ ಮತ್ತು ಇರಾನ್ ನಡುವೆ ಮಾತುಕತೆಗಳು ಚುರುಕುಗೊಂಡಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮಗೆ ಭಾರತದ ಬೆಂಬಲವಿದೆ ಎಂದು ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಹುದ್ದೆಯಿಂದ ಪದಚ್ಯುತಿಗೊಂಡ ಎರಡು ವರ್ಷಗಳ ನಂತರ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ನೇರ ಸಂವಾದ ನಡೆಸಿದ್ದಾರೆ.
ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಸರ್ಕಾರವು ಭಾರತ ಸೇರಿದಂತೆ 60 ದೇಶಗಳ ಮೇಲೆ ವಿಧಿಸಲು ಉದ್ದೇಶಿಸಿರುವ ಆಮದು ಸುಂಕವನ್ನು ವಿರೋಧಿಸಿ ಅಮೆರಿಕದ 25 ರಾಜ್ಯಗಳು ನ್ಯಾಯಾಲಯದ ಮೆಟ್ಟಿಲೇರಿವೆ.
ಪಾಕಿಸ್ತಾನವು ಪಿಒಕೆ ಪ್ರತಿಭಟನೆಯನ್ನು ಕವರ್ ಮಾಡಿದ ಅಲ್ ಜಜೀರಾ ಸುದ್ದಿ ಸಂಸ್ಥೆಯನ್ನು ಬ್ಯಾನ್ ಮಾಡಿದೆ. ಬಾಂಗ್ಲಾದೇಶದ ಖ್ಯಾತ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಅವರ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 6,000 ದಾಟಿದೆ.
ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ಮಕ್ಕಳ ಮೇಲಿನ ದೌರ್ಜನ್ಯದ ಕಂಟೆಂಟ್ ಹಾಗೂ ಡೀಪ್‌ಫೇಕ್ ಸಮಸ್ಯೆಗಳ ಕುರಿತು ಕ್ಷಮೆಯಾಚಿಸಿದ್ದಾರೆ.

ಇಂದಿನ ಪ್ರಮುಖ ರಾಷ್ಟ್ರೀಯ ಸುದ್ದಿಗಳು:

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ಬ್ಯಾಂಕ್ ಬಡ್ಡಿದರದಲ್ಲಿ (ರೆಪೊ ದರ) ಯಾವುದೇ ಬದಲಾವಣೆ ಮಾಡದೆ, ಶೇಕಡಾ 5.25 ರಲ್ಲೇ ಮುಂದುವರಿಸಲು ತೀರ್ಮಾನಿಸಿದೆ.
ಹಣ ಪಾವತಿಸಿ ನಿರ್ದಿಷ್ಟ ಕಂಟೆಂಟ್ ಪ್ರಮೋಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ‘ಮೆಟಾ’ ಸಂಸ್ಥೆಯು ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದೆ.
ಅಮೆರಿಕದಲ್ಲಿ ಭಾರತೀಯರ ವೀಸಾ ನವೀಕರಣ ಪ್ರಕ್ರಿಯೆಗೆ ಹೊಸ ನಿಯಮಗಳು ಜಾರಿಯಾಗಿದ್ದು, ಹೆಚ್-1ಬಿ ಹಾಗೂ ಎಲ್-1 ವೀಸಾ ಶುಲ್ಕದಲ್ಲಿ ಗಣನೀಯ ಏರಿಕೆಯಾಗಿದೆ.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ಧರಣಿ ನಡೆಸುತ್ತಿದ್ದು, ಕಲಾಪದಲ್ಲಿ ತೀವ್ರ ಗದ್ದಲ ಉಂಟಾಗಿದೆ.
ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಂತ್ರಸ್ತರಿಗೆ ಸರ್ಕಾರದಿಂದ ತುರ್ತು ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ.
ಆಯುಷ್ಮಾನ್ ಭಾರತ್ ಯೋಜನೆಯಡಿ ಇನ್ಮುಂದೆ ಉಚಿತವಾಗಿ ಮೂತ್ರಪಿಂಡ (ಕಿಡ್ನಿ) ಕಸಿ ಚಿಕಿತ್ಸೆಯನ್ನೂ ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕರ್ನಾಟಕ/ ಬೆಂಗಳೂರು :

ರಾಜ್ಯ ರಾಜಕೀಯ ಬೆಳವಣಿಗೆ: ಕಾಂಗ್ರೆಸ್ ಶಾಸಕರ ಅಸಮಾಧಾನ ಶಮನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲ ಸಂಧಾನಕ್ಕೆ ಮುಂದಾಗಿದ್ದು, ಶಾಸಕ ಎಂ. ಕೃಷ್ಣಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಅಸಮಾಧಾನಿತ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ರಾಜೀನಾಮೆ ನಿರ್ಧಾರ ವಾಪಸ್ ಪಡೆದಿದ್ದಾರೆ.
ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್. ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದು, ಕಲಾಪದಲ್ಲಿ ರಾಜಕೀಯ ಚಟುವಟಿಕೆಗಳು ಕಾವು ಪಡೆದುಕೊಂಡಿವೆ.
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಪಘಾತಕ್ಕೀಡಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಕ್ಯಾಂಪಸ್‌ನಲ್ಲಿ ಸುರಕ್ಷತಾ ಕ್ರಮಗಳಿಗೆ ಆಗ್ರಹಿಸಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವಿನ ವಂದೇ ಭಾರತ್ ರೈಲು ಸೇವೆಯ ಭಾಗವಾಗಿ ಸಕಲೇಶಪುರ ಘಾಟ್ ಮಾರ್ಗದಲ್ಲಿ ಆಗಸ್ಟ್ 11ರಿಂದ ಪ್ರಾಯೋಗಿಕ ಸಂಚಾರ (Trial Run) ಆರಂಭವಾಗಲಿದೆ.

ಮುಂಬೈ ಮತ್ತು ಉಪನಗರಗಳ ಇಂದಿನ ಪ್ರಮುಖ ಹಾಗೂ ತಾಜಾ ಸುದ್ದಿಗಳು:

ಮುಂಬೈ ಮಂಡಳಿಯ 2,640 ಮನೆಗಳ ಲಾಟರಿ ಫಲಿತಾಂಶವನ್ನು ಮ್ಹಾಡಾ ಇಂದು ಮಧ್ಯಾಹ್ನ 12 ಗಂಟೆಗೆ ಬಾಂದ್ರಾದ ರಂಗಶಾರದಾ ಸಭಾಂಗಣದಲ್ಲಿ ಪ್ರಕಟಿಸಲಿದೆ. ಈ ಮನೆಗಳಿಗಾಗಿ ಸುಮಾರು 97,000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು.
ಮುಂಬೈನ ಪೂರ್ವ ಉಪನಗರ ವಿಕ್ರೋಲಿಯ ಪಾರ್ಕ್‌ಸೈಟ್ ಪ್ರದೇಶದ ರಾಹುಲ್ ನಗರದಲ್ಲಿ ಮುಂಜಾನೆ ಜೋರಾಗಿ ಹಾಡು ಹಾಕಿದ್ದಕ್ಕೆ ಸಹೋದರರ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಇಬ್ಬರು ಸಹೋದರರು ಸೇರಿ ಮತ್ತೊಬ್ಬ ಸಹೋದರ ಹಾಗೂ ಅವರ ಕುಟುಂಬದ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಇಬ್ಬರು ಮೃತಪಟ್ಟು ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಹೋಮಿಯೋಪತಿ ವೈದ್ಯರಿಗೆ ಅಲೋಪತಿ ಔಷಧ ನೀಡಲು ಅವಕಾಶ ನೀಡಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಮಹಾರಾಷ್ಟ್ರ ನಿವಾಸಿ ವೈದ್ಯರ ಸಂಘ (MARD) ನಡೆಸುತ್ತಿರುವ ಮುಷ್ಕರ ತೀವ್ರಗೊಂಡಿದೆ. ಸರ್ಕಾರ ಇಂದು ಮಾತುಕತೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಮುಂಬೈ ಸೇರಿದಂತೆ ರಾಜ್ಯಾದ್ಯಂತ ತುರ್ತು ಸೇವೆಗಳನ್ನೂ ಸ್ಥಗಿತಗೊಳಿಸುವುದಾಗಿ ವೈದ್ಯರು ಎಚ್ಚರಿಸಿದ್ದಾರೆ.
ಮುಂಬೈ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆಗಾಗಿ ಪೊಲೀಸರು ಜುಲೈ 23 ರಿಂದ ಜಾರಿಗೆ ತಂದಿದ್ದ 5ಕ್ಕಿಂತ ಹೆಚ್ಚು ಜನರು ಸಾರ್ವಜನಿಕವಾಗಿ ಗುಂಪು ಸೇರುವುದನ್ನು ನಿಷೇಧಿಸುವ ನಿಷೇಧಾಜ್ಞೆ (Prohibitory Orders) ಇಂದು ಮಧ್ಯರಾತ್ರಿಗೆ ಮುಕ್ತಾಯಗೊಳ್ಳಲಿದೆ.

ಉಡುಪಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಇತ್ತೀಚಿನ ಮತ್ತು ಪ್ರಮುಖ ಸುದ್ದಿಗಳು:

​ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಒಟ್ಟು 10,63,876 ಮತದಾರರಲ್ಲಿ 9,99,534 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಿ ಶೇ. 93.95ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು (IMD) ಆಗಸ್ಟ್ 9ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿಯ ಮುಂಡ್ಲಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಪಶ್ಚಿಮ ಘಟ್ಟದ ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಕೇಂದ್ರ ಸರ್ಕಾರದ ಪ್ರಕ್ರಿಯೆಗೆ ಮುನಿಯಾಲು ಹಾಗೂ ಮಲೆನಾಡು ಕರಾವಳಿ ಭಾಗದ ನಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಕುಂದಾಪುರ ತಾಲೂಕಿನ ತೆಕ್ಕಟ್ಟೆಯ ದಿನಸಿ ಅಂಗಡಿಯೊಂದರಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಭಸ್ಮವಾಗಿವೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರಿನ ಪ್ರಮುಖ ಮತ್ತು ತಾಜಾ ಸುದ್ದಿಗಳು :

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಮಂಗಳೂರು ನಗರದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಳಿತ ಉಂಟಾಗಿದ್ದು, ಬಂಟ್ವಾಳ ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಸುರಕ್ಷಿತವಾಗಿರಲು ಸೂಚಿಸಲಾಗಿದೆ.
ಮಂಗಳೂರು-ಬೆಂಗಳೂರು ಸಂಪರ್ಕಿಸುವ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ಘಾಟ್ (ಎಡಕುಮೇರಿ) ಮಾರ್ಗದಲ್ಲಿ ತಡರಾತ್ರಿ ಭೂಕುಸಿತ ಸಂಭವಿಸಿ ಹಳಿ ಮೇಲೆ ಮಣ್ಣು ಬಿದ್ದಿದ್ದರಿಂದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಸ್ತುತ ಹಳಿ ತೆರವುಗೊಳಿಸುವ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು ಸಂಚಾರ ಯಥಾಸ್ಥಿತಿಗೆ ತರಲು ಪ್ರಯತ್ನಿಸಲಾಗುತ್ತಿದೆ.
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು ಸುಮಾರು 34.48 ಲಕ್ಷ ರೂ. ದೋಚಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಕಾಲೇಜು ಹಾಸ್ಟೆಲ್‌ಗೆ ಗಾಂಜಾ ತಂದಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬಿಕರ್ನಕಟ್ಟೆ-ಸಾಣೂರು ರಾಷ್ಟ್ರೀಯ ಹೆದ್ದಾರಿ-169 ಕಾಮಗಾರಿ ನಡೆಯುತ್ತಿರುವ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಮಣ್ಣು ಕುಸಿತ ಉಂಟಾಗಿದ್ದು, ಸಂಚಾರ ಸುಗಮಗೊಳಿಸಲು ಸ್ಥಳೀಯ ಆಡಳಿತ ತುರ್ತು ಕ್ರಮಗಳನ್ನು ಕೈಗೊಂಡಿದೆ.
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ನಡೆಸಿದ ಆರೋಪದಡಿ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/08/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (02/08/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (26/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk