28 C
Mumbai
September 29, 2026
Mumbai News Kannada
ತುಳುನಾಡು

ಬಿರುವೆರ್‌ ಕಾಪು ಸೇವಾ ಸಮಿತಿಯಿಂದ ಆಟಿ ಕಷಾಯ, ಮೆಂತೆ ಗಂಜಿ ವಿತರಣೆ



ಕಾಪು: ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್‌ ಕಾಪು ಸೇವಾ ಸಮಿತಿಯ ವತಿಯಿಂದ ಕಾಪು ಪೇಟೆಯಲ್ಲಿ ಉಚಿತವಾಗಿ ಹಾಳೆ ಮರದ ತೊಗಟೆಯ ಕಷಾಯ ಮತ್ತು ಮೆಂತೆ ಗಂಜಿಯನ್ನು ವಿತರಿಸಲಾಯಿತು.

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಂಬಗುಡ್ಡೆ ಅವರ ನೇತೃತ್ವದಲ್ಲಿ ಪರಿಸರದ ವಿವಿಧೆಡೆಗಳಿಂದ ಹಾಳೆ ಮರದ ತೊಗಟೆಯನ್ನು ಸಂಗ್ರಹಿಸಿ, ಸಾಂಪ್ರದಾಯಿಕ ಶೈಲಿಯಲ್ಲಿ ಸುಮಾರು 150 ಲೀಟರ್‌ನಷ್ಟು ಆಟಿಯ ಕಷಾಯವನ್ನು ಸಿದ್ಧಪಡಿಸಿ ಸರ್ವಧರ್ಮೀಯರಿಗೆ ವಿತರಿಸಲಾಯಿತು. ಸುಮಾರು 1,000ಕ್ಕೂ ಅಧಿಕ ಮಂದಿ ಕಷಾಯ ಹಾಗೂ ಮೆಂತೆ ಗಂಜಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬಿರುವೆರ್‌ ಕಾಪು ಸೇವಾ ಸಮಿತಿಯ ಅಧ್ಯಕ್ಷ ಕಾರ್ತಿಕ್ ಅಮೀನ್ ಕಲ್ಲುಗುಡ್ಡೆ, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಬಾಲಕೃಷ್ಣ ಕೋಟ್ಯಾನ್, ಕೋಶಾಧಿಕಾರಿ ಅಶ್ವಿನಿ ನವೀನ್, ಸದಸ್ಯರಾದ ವಿಕ್ಕಿ ಪೂಜಾರಿ ಮಡುಂಬು, ರಾಕೇಶ್‌ ಕುಂಜೂರು, ಅನಿಲ್‌ ಅಮೀನ್‌ ಕಾಪು, ರವಿರಾಜ್‌ ಇನ್ನಂಜೆ, ಶರತ್ ಪೂಜಾರಿ ಹಾಗೂ ಉದ್ಯಮಿ ಪ್ರಭಾಕರ ಪೂಜಾರಿ ಕೈಪುಂಜಾಲು ಮೊದಲಾದವರು ಉಪಸ್ಥಿತರಿದ್ದರು.



Related posts

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ನಾಡಿನ ಸಂಸ್ಕೃತಿ ಉಳಿಸುವಲ್ಲಿ ಕಟೀಲು ಕ್ಷೇತ್ರದ ಪಾತ್ರ ಅನನ್ಯ: ಸಚಿವ ಯು. ಟಿ. ಖಾದರ್ (೨೬ನೇ ವರ್ಷದ ಕೀರ್ತಿಶೇಷ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ)

Mumbai News Desk

ಸಸಿಹಿತ್ಲು: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸಾಧಕರಾಗಿ – ವೇದಪ್ರಕಾಶ್ ಎಂ. ಶ್ರೀಯಾನ್

Mumbai News Desk

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk