September 5, 2026
Mumbai News Kannada
ಸುದ್ದಿ

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ





ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು.

ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು.

ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್ ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು.

ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್, ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ, ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಂಚನ್ ಪಡೆದ ಪ್ರಶಸ್ತಿಗಳು

ಇವರ ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ’ ರಾಜ್ಯ ಪ್ರಶಸ್ತಿ, 2016ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ, 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ, ನಮ್ಮ ಕುಡ್ಲ ಸಾಧಕ ಪ್ರಶಸ್ತಿ, 2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಕೆ.ಎ. ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ, 2021ರಲ್ಲಿ ಸಿದ್ಧಗಂಗಾಶ್ರೀ ರಾಜ್ಯ ಪ್ರಶಸ್ತಿ, 2022ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದಿಂದ ಕೆ.ಆರ್. ಟ್ಯಾಗೋರ್ ದತ್ತಿನಿಧಿ ಪ್ರಶಸ್ತಿ, 2023ರಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪುರಸ್ಕಾರ, ಸಾಧನಾ ಪ್ರಶಸ್ತಿ-2023, 2024ರಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ, 2026ರಲ್ಲಿ ಜಾನಪದ ರತ್ನ ಪ್ರಶಸ್ತಿ ಹಾಗೂ ಕನ್ನಡ ಪಯಸ್ವಿನಿ ಅವಾರ್ಡ್-2026 ಅಂತರರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಸನ್ಮಾನ-ಪುರಸ್ಕಾರಗಳು ಇವರಿಗೆ ಸಂದಿವೆ.



Related posts

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ ಡಿ. ದೇವರಾಜ್ ಅರಸು ರವರ ಜನ್ಮದಿನಾಚರಣೆ ಮತ್ತು ಪರಿಶಿಷ್ಟ ಪಂಗಡದ ಇಬ್ಬರು ಪಿ.ಹೆಚ್.ಡಿ ಪದವಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ

Mumbai News Desk