31 C
Mumbai
September 11, 2026
Mumbai News Kannada
ಕರ್ನಾಟಕ

ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೋ ಟ್ರೋಫಿ – 2026ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರಿಗೆ ಅಧಿಕೃತ ಆಹ್ವಾನ





ಹೆಜಮಾಡಿಯಲ್ಲಿ ಸಚಿವರಿಗೆ ಭಾರತ್ ಜೋಡೋ ಟ್ರೋಫಿ – 2026ರ ಪೋಸ್ಟರ್ ಬಿಡುಗಡೆ ಹಾಗೂ ಮನವಿ ಪತ್ರ ಸಲ್ಲಿಕೆ

ಹೆಜಮಾಡಿ, ಸೆಪ್ಟೆಂಬರ್ 9: ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಅಕ್ಟೋಬರ್ 2, 3 ಹಾಗೂ 4ರಂದು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ್ ಜೋಡೋ ಟ್ರೋಫಿ – 2026 ಹಾಗೂ “ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಬೃಹತ್ ಭಾರತ್ ಜೋಡೋ ರ‍್ಯಾಲಿ” ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ರಿಜ್ವಾನ್ ಅರ್ಷದ್ ಅವರಿಗೆ ಹೆಜಮಾಡಿ ಮಿನಿ ಟೋಲ್‌ಗೇಟ್ ಬಳಿ ಆತ್ಮೀಯ ಸ್ವಾಗತ ನೀಡಿ ಅಧಿಕೃತ ಆಹ್ವಾನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭಾರತ್ ಜೋಡೋ ಟ್ರೋಫಿ – 2026ರ ಅಧಿಕೃತ ಪೋಸ್ಟರ್ ಹಾಗೂ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿ, ಅಕ್ಟೋಬರ್ 2ರಂದು ಬೆಳಿಗ್ಗೆ ನಡೆಯಲಿರುವ ಭಾರತ್ ಜೋಡೋ ರ‍್ಯಾಲಿಗೆ ಚಾಲನೆ ನೀಡುವಂತೆ ಹಾಗೂ ಅದೇ ದಿನ ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರಿಕೆಟ್ ಹಾಗೂ ಮಹಿಳಾ ಥ್ರೋಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸುವಂತೆ ವಿನಂತಿಸಲಾಯಿತು.

ಸಚಿವರಿಗೆ ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿದ ನಿಯೋಗ, ಭಾರತ್ ಜೋಡೋ ಟ್ರೋಫಿ – 2026 ಕೇವಲ ಕ್ರೀಡಾಕೂಟವಲ್ಲ; ಯುವಜನರಲ್ಲಿ ಕ್ರೀಡಾ ಮನೋಭಾವ ಬೆಳೆಸುವುದು, ಮಹಿಳಾ ಕ್ರೀಡಾಶಕ್ತಿಗೆ ವೇದಿಕೆ ಕಲ್ಪಿಸುವುದು, ಮಾದಕ ವ್ಯಸನದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸಮಾಜಸೇವೆಯ ಸಂಕಲ್ಪದೊಂದಿಗೆ ಶಿಕ್ಷಣ ಮತ್ತು ವೈದ್ಯಕೀಯ ನೆರವಿನಂತಹ ಮಾನವೀಯ ಕಾರ್ಯಗಳನ್ನು ಕೈಗೊಳ್ಳುವ ಮಹತ್ವಾಕಾಂಕ್ಷೆಯ ಸಮಾಜಮುಖಿ ಕಾರ್ಯಕ್ರಮವಾಗಿದೆ ಎಂದು ತಿಳಿಸಿತು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಕುರಿತು ಮಾಹಿತಿ ಪಡೆದು, ಪಂದ್ಯಾವಳಿ ಮತ್ತು ಭಾರತ್ ಜೋಡೋ ರ‍್ಯಾಲಿಗೆ ಶುಭ ಹಾರೈಸಿ ಯಶಸ್ವಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಂಯೋಜಕರಾದ ಅಬ್ದುಲ್ ಅಜೀಜ್ ಹೆಜಮಾಡಿ ಹಾಗೂ ನವೀನ್ ಚಂದ್ರ ಜೆ. ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷ ವೈ. ಸುಕುಮಾರ್, ಉಪಾಧ್ಯಕ್ಷ ಸುಧೀರ್ ಕರ್ಕೇರ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಬೋಧ್ ಚಂದ್ರ ಹೆಜಮಾಡಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್, ಹೆಜಮಾಡಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಕ್ಷಾ ಕೆ., ಹೆಜಮಾಡಿ ಗ್ರಾಮೀಣ ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷ ವಿಶಾಲ್ ವಿ. ಬಂಗೇರ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಕ್ಟೋಬರ್ 2ರಿಂದ 4ರವರೆಗೆ ನಡೆಯಲಿರುವ ಭಾರತ್ ಜೋಡೋ ಟ್ರೋಫಿ – 2026ರಲ್ಲಿ 19 ಕ್ರಿಕೆಟ್ ತಂಡಗಳು ಹಾಗೂ 15 ಮಹಿಳಾ ಥ್ರೋಬಾಲ್ ತಂಡಗಳು ಭಾಗವಹಿಸಲಿದ್ದು, ಹೆಜಮಾಡಿಯನ್ನು ಕೇಂದ್ರವಾಗಿಸಿಕೊಂಡು ಯುವಶಕ್ತಿ, ಮಹಿಳಾ ಕ್ರೀಡಾಶಕ್ತಿ, ರಾಷ್ಟ್ರೀಯ ಐಕ್ಯತೆ ಹಾಗೂ ಸಮಾಜಸೇವೆಯ ಸಂದೇಶ ಸಾರುವ ಬೃಹತ್ ಕ್ರೀಡಾ ಮಹೋತ್ಸವವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.



Related posts

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ರಾಜ್ಯ ಸರ್ಕಾರದ ಗಮನಕ್ಕೆ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ತಾಯಿಯ ಅಗಲಿಕೆಯ ನೋವಿನಲ್ಲೂ ಅಪ್ರತಿಮ ಸಾಧನೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಕಾಲೇಜಿನ ದಿಶಾ

Mumbai News Desk

ಕರ್ನಾಟಕ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Mumbai News Desk

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk