
ಕಾಪು, ಅಕ್ಟೋಬರ್ 11: ಕಾಪು ಮಾರಿಯಮ್ಮನ ಸನ್ನಿಧಾನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಉಚ್ಚಂಗಿ ಸಹಿತ ಮಾರಿಯಮ್ಮನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶರನ್ನವರಾತ್ರಿ ಮಹೋತ್ಸವದ ಉದ್ಘಾಟನೆ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ನಂತರ ನವದುರ್ಗಾ ಲೇಖನ ಮಂಟಪದಲ್ಲಿ ಲೇಖನ ಬರೆಯುವ ಮೂಲಕ ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ, “ಬಹಳ ಪುರಾತನ ಸಂಸ್ಕೃತಿಯನ್ನು ಹೊಂದಿರುವ ಈ ದೇವಳವು ಇಡೀ ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಿದೆ. ನವದುರ್ಗಾ ಲೇಖನದಂತಹ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಡಿನ ಸಮಸ್ತ ಭಕ್ತರು ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆನಂದ್ ಎಂ. ಶೆಟ್ಟಿ ಮಾತನಾಡಿ, “ನನ್ನ ತಾಯಿಯ ಕನಸಿನಲ್ಲಿ ಅಮ್ಮ ಬರುತ್ತಿದ್ದ ಕಾರಣ ಅವರು ಇಲ್ಲಿಗೆ ಬರುತ್ತಿದ್ದರು. ಇಂದು ನಾನೂ ಕೂಡ ಬರುತ್ತಿದ್ದೇನೆ. ಇಲ್ಲಿನ ತಾಯಿಯ ಶಕ್ತಿ ಅಪಾರವಾದುದು. ಭಕ್ತರ ಎಂತಹ ಕಷ್ಟವನ್ನಾದರೂ ದೂರ ಮಾಡುವ ಶಕ್ತಿ ಜಗದೀಶ್ವರಿ, ಜಗನ್ಮಾತೆ ತಾಯಿ ಮಾರಿಯಮ್ಮನಿಗಿದೆ. ಎಲ್ಲರೂ ನವದುರ್ಗಾ ಲೇಖನ ಬರೆದು, ಶಾಶ್ವತ ಸೇವೆ ನೀಡಿ ಆಕೆಯ ಅನುಗ್ರಹಕ್ಕೆ ಪಾತ್ರರಾಗಿ” ಎಂದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ (IAS), ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ (IPS), ಮುಂಬೈನ ಆರ್ಗ್ಯಾನಿಕ್ ಇಂಡಸ್ಟ್ರೀಸ್ ಪ್ರೈ. ಲಿ. ವ್ಯವಸ್ಥಾಪಕ ನಿರ್ದೇಶಕ ಆನಂದ್ ಎಂ. ಶೆಟ್ಟಿ ತೋನ್ಸೆ, ಮುಂಬೈನ ವಿಕೆ ಗ್ರೂಪ್ ಆಫ್ ಕಂಪನೀಸ್ ಪ್ರೈ. ಲಿ. ವ್ಯವಸ್ಥಾಪಕ ನಿರ್ದೇಶಕ ಕೆ. ಎಂ. ಶೆಟ್ಟಿ, ಮಾಹೆ ಮಣಿಪಾಲದ ಸಹ-ಕುಲಾಧಿಪತಿ ಡಾ. ಎಚ್. ಎಸ್. ಬಳ್ಳಾಲ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಗೌರವ ಸಲಹೆಗಾರರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲ್, ಕೆ. ವಿಶ್ವನಾಥ್, ಕಾಪು ಲಕ್ಷ್ಮಿ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಧಾರ್ಮಿಕ ಸಮಿತಿಯ ಪ್ರಧಾನ ಸಂಚಾಲಕ ಕೆ. ಭಗವಾನ್ ದಾಸ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಸಾವಿತ್ರಿ ಗಣೇಶ್, ಪ್ರಧಾನ ಕಾರ್ಯದರ್ಶಿ ಗೀತಾಂಜಲಿ ಎಂ. ಸುವರ್ಣ, ಕೋಶಾಧಿಕಾರಿ ಸುನಿಲ್ ಎಸ್. ಪೂಜಾರಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್, ಮನೋಹರ್ ರಾವ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಕೊಡವೂರು ಸಾಯಿಬಾಬಾ ಮಂದಿರದ ಟ್ರಸ್ಟಿ ದಿವಾಕರ ಶೆಟ್ಟಿ ಕೊಡವೂರು, ಸುಧಾಕರ ಶೆಟ್ಟಿ ಮಕರ, ಡಾ. ಪ್ರಶಾಂತ್ ಶೆಟ್ಟಿ ಕಾಪು, ಬೀನಾ ವಿ. ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಅನುರಾಧ ಮನೋಹರ್ ಶೆಟ್ಟಿ, ಕಾಪು ಜಯರಾಮ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ನಿರ್ಮಲ್ ಕುಮಾರ್ ಹೆಗ್ಡೆ ಮತ್ತು ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ವಂದಿಸಿದರು.



