October 31, 2026
Mumbai News Kannada
ಕರ್ನಾಟಕ

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಜಿ.ಎಸ್. ಚಂದ್ರಶೇಖರ್ ಹೆಸರು ಕೈಬಿಟ್ಟ ಕ್ರಮಕ್ಕೆ ನಮ್ಮ ತುಳುನಾಡ ಪರಿಷತ್ ಅಸಮಾಧಾನ



ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಮೊದಲ ಪಟ್ಟಿಯಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಘೋಷಿಸಿ, ಕೇವಲ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ಕಾರಣ ನೀಡಿ ಪಟ್ಟಿಯಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ನಮ್ಮ ತುಳುನಾಡ ಪರಿಷತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರದ ಈ ಕ್ರಮವು ತುಳುನಾಡಿನ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಪರಿಷತ್ತು ಅಭಿಪ್ರಾಯಪಟ್ಟಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಹೆಸರನ್ನು ಪ್ರಕಟಿಸಿದ ಬಳಿಕ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಅದನ್ನು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಉಂಟಾಗಿರುವ ಲೋಪವನ್ನು ತಕ್ಷಣ ಸರಿಪಡಿಸಬೇಕು ಎಂದು ನಮ್ಮ ತುಳುನಾಡ ಪರಿಷತ್ತು ಆಗ್ರಹಿಸಿದೆ.

ತುಳುನಾಡಿನ ಗೌರವ ಮತ್ತು ಅರ್ಹ ವ್ಯಕ್ತಿಗಳಿಗೆ ಸಲ್ಲಬೇಕಾದ ಮನ್ನಣೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಅನ್ಯಾಯವನ್ನು ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ತುಳುನಾಡಿಗೆ ಮಾಡಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ನಮ್ಮ ತುಳುನಾಡ ಪರಿಷತ್ ಸಂಸ್ಥಾಪಕ ಅಧ್ಯಕ್ಷ ರೋಹಿತ್ ಕರಂಬಳ್ಳಿಯವರು ಅಕ್ಟೋಬರ್ 31ರಂದು ಬಿಡುಗಡೆಗೊಳಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

“ಸಹಕಾರ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಹಾಗೂ ಅಭಿವಂದನಾ ಕಾರ್ಯಕ್ರಮ

Mumbai News Desk

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಕರ್ನಾಟಕ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ

Mumbai News Desk

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಸುಶ್ಮಿತಾ ಯು ಪೂಜಾರಿ ಗೆ ಶೇ.99.20 ಅಂಕ

Mumbai News Desk