October 31, 2026
Mumbai News Kannada
ತುಳುನಾಡು

ರಮೇಶ್ ಕಾಂಚನ್ ಜನ್ಮದಿನದ ಪ್ರಯುಕ್ತ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ



196 ಯುನಿಟ್ ರಕ್ತ ಸಂಗ್ರಹ; 200 ಮಂದಿ ವಿಶೇಷ ಚೇತನರಿಗೆ ಆಹಾರ ಕಿಟ್ ವಿತರಣೆ

ಜಯ ಸಿ. ಪೂಜಾರಿ, ಕೆಳಾರ್ಕಳ ಬೆಟ್ಟು

ಉಡುಪಿ: ರಕ್ತದಾನ ಮಾಡುವ ಮೂಲಕ ಇತರರ ಜೀವ ಉಳಿಸುವುದು ಶ್ರೇಷ್ಠ ಮಾನವೀಯ ಕಾರ್ಯ. ವಿಶೇಷ ಚೇತನರಿಗೆ ಪೌಷ್ಟಿಕ ಆಹಾರ ಒದಗಿಸಿ ಅವರ ಬದುಕಿಗೆ ಆಸರೆಯಾಗುವುದು ಶ್ಲಾಘನೀಯ ಸೇವೆಯಾಗಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ಜನ್ಮದಿನದ ಪ್ರಯುಕ್ತ ಅ. 29ರಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಅಜ್ಜರಕಾಡಿನ ಪುರಭವನದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, 200 ಮಂದಿ ವಿಶೇಷ ಚೇತನರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನರ ಬದುಕನ್ನು ಕಟ್ಟುವ ಇಂತಹ ಮಾನವೀಯ ಕಾರ್ಯಗಳಿಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ರಮೇಶ್ ಕಾಂಚನ್ ಅವರು ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿರುವುದು ಅಭಿನಂದನೀಯ ಎಂದರು.

ಶಿಬಿರದಲ್ಲಿ ಒಟ್ಟು 196 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಕಳೆದ ಐದು ವರ್ಷಗಳಿಂದ ರಮೇಶ್ ಕಾಂಚನ್ ಅವರು ತಮ್ಮ ಜನ್ಮದಿನದಂದು ಬಡವರಿಗೆ ವಿವಿಧ ರೀತಿಯ ನೆರವು ಹಾಗೂ ಆಹಾರ ಕಿಟ್‌ಗಳನ್ನು ವಿತರಿಸುತ್ತಿರುವುದು ಅವರ ಸಮಾಜಸೇವಾ ಮನೋಭಾವಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಪಿಸಿಸಿ ಮೀನುಗಾರಿಕಾ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ, ಪ್ರಸಾದ್‌ರಾಜ್ ಕಾಂಚನ್, ಕುಶಲಕರ್ಮಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೃಷಿ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹಾಗೂ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮತ್ತಿತರರು ಮಾತನಾಡಿ ರಮೇಶ್ ಕಾಂಚನ್ ಅವರ ಸಮಾಜಸೇವೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಹಾಗೂ ರಮೇಶ್ ಕಾಂಚನ್ ಅವರನ್ನು ಗೌರವಿಸಲಾಯಿತು. ಅಲ್ಲದೆ, 87 ಬಾರಿ ರಕ್ತದಾನ ಮಾಡಿರುವ ಬನ್ನಂಜೆಯ ಯು. ಸುಧೇಶ್ ಶೆಟ್ಟಿ ಅವರನ್ನು ರಮೇಶ್ ಕಾಂಚನ್ ಅವರು ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೆರೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ರಾಜು ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರೀಶ್ ಕಿಣಿ, ದಿವಾಕರ್ ಕುಂದರ್, ಮುರಳಿ ಶೆಟ್ಟಿ, ಸೌರಭ್ ಬಲ್ಲಾಳ್, ರಾಘವೇಂದ್ರ ಶೆಟ್ಟಿ, ಮಮತಾ ಶೆಟ್ಟಿ, ಅನಿತಾ ಬಾಬು ಪೂಜಾರಿ, ದಯಾನಂದ ಡಿ. ಕೊಡವೂರು, ಪುಷ್ಪ ಅಂಚನ್, ಸಂಜಯ್ ಆಚಾರ್ಯ, ರಮೇಶ್ ಉಗ್ಗೇಲಬೆಟ್ಟು, ಪ್ರಖ್ಯಾತ್ ಶೆಟ್ಟಿ, ಸಂತೋಷ್ ಕುಲಾಲ್, ಮಾಜಿ ಕೌನ್ಸಿಲರ್ ವಿಜಯ ಪೂಜಾರಿ, ಶಾಯಿರಾಜ್ ಕಿದಿಯೂರು, ಕೇಶವ ಕೋಟ್ಯಾನ್, ಮಾಧವ ಬನ್ನಂಜೆ, ಸುಧೇಶ್ ಭಂಡಾರಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸತೀಶ್ ಕೊಡವೂರು ಸ್ವಾಗತಿಸಿದರು. ದಯಾನಂದ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ನೆರ್ಗಿ ವಂದಿಸಿದರು.



Related posts

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಮುಲ್ಕಿ : ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನ

Mumbai News Desk

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್: “ಜೈ” ತುಳು ಚಿತ್ರದ ನಟನೆಗೆ ಅಕ್ಷರ್ ಜಗನ್ನಾಥ್ ಶೆಟ್ಟಿ ಬಾಳಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ

Mumbai News Desk

ಹೆಜಮಾಡಿ ಬೈಪಾಸ್ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆ: 15 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹಾಗೂ ಅನಿರ್ದಿಷ್ಟಾವಧಿಯ ಹೋರಾಟ: ವಿನಯ್ ಕುಮಾರ್ ಸೊರಕೆ ಎಚ್ಚರಿಕೆ

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk