ಮುಲ್ಕಿ: ಮುಲ್ಕಿಯ ವಕೀಲ ಹಾಗೂ ಮಡಿವಾಳ ಕೆರೆ ನಿವಾಸಿ ಭಾಸ್ಕರ ಹೆಗ್ಡೆ (62) ಅವರು ನವೆಂಬರ್ 2 ರಂದು ತಮ್ಮ ನಿವಾಸದಲ್ಲಿ ನಿಧನರಾದರು.
ಅವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮೂಲ್ಕಿ ಪರಿಸರದಲ್ಲಿ ಖ್ಯಾತ ವಕೀಲರಾಗಿ ಗುರುತಿಸಿಕೊಂಡಿದ್ದ ಅವರು ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಮೂಲ್ಕಿ ಆಟೋ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾಗಿ, ಖ್ಯಾತ ನಿರೂಪಕರಾಗಿ ಹಾಗೂ ವಿಶಿಷ್ಟ ಮಾತುಗಾರಿಕೆಯಿಂದ ಪ್ರಸಿದ್ಧರಾಗಿದ್ದರು. ದಕ್ಷಿಣ ಕನ್ನಡ ಕಾಸರಗೋಡು ಯುವಜನ ಒಕ್ಕೂಟದ ಪದಾಧಿಕಾರಿಯಾಗಿ, ಕ್ರೀಡಾಕಾರರಾಗಿ, ಮೂಲ್ಕಿ ಅಯ್ಯಪ್ಪ ಸಮಿತಿಯ ಗೌರವ ಸಲಹೆಗಾರರಾಗಿ, ಹೆಜಮಾಡಿ ಜೈ ಕರ್ನಾಟಕ ಸಂಘ, ಕರ್ನಾಟಕ ಯುವಕ ಮಂಡಲ ಸೇರಿದಂತೆ ಅನೇಕ ಸೇವಾ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲ್ಕಾಡಿ, ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರದಿಂದ ಪೂಂಜಾ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನಿಲ್ ಆಳ್ವ, ಉದ್ಯಮಿ ಅತುಲ್ ಕುಡ್ವ ಅಟಲ್ ಕೃಪಾ, ನಿವೃತ್ತ ಬ್ಯಾಂಕ್ ಪ್ರಬಂಧಕ ಸತೀಶ್ ಭಟ್ ,
ಡಾ. ಹರಿಕೃಷ್ಣ ಪಿ. ಸಾಲ್ಯಾನ್, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಮಟ್ಟು, ಮೂಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ, ಮಾಜಿ ಅಧ್ಯಕ್ಷ ಗೋವಿನಾಥ ಪಡಂಗ, ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮನೋಹರ ಕೋಟ್ಯಾನ್, ಮೂಲ್ಕಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಅಂಚನ್, ಮಾಜಿ ಸದಸ್ಯರಾದ ಪೃಥು ಬಾವ, ಲಮೇಶ್ ಮಾನಂಪಾಡಿ, ಹರ್ಷರಾಜ ಶೆಟ್ಟಿ, ಸುಭಾಷ್ ಶೆಟ್ಟಿ,. ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.



