November 5, 2026
Mumbai News Kannada
ತುಳುನಾಡು

ಮೂಲ್ಕಿಯಲ್ಲಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್ ಮಹತ್ವದ ಸಭೆ: ರಾಜಶೇಖರ ಕೋಟ್ಯಾನ್ ಅವರಿಗೆ ಸನ್ಮಾನ









ಮೂಲ್ಕಿ: ಇಲ್ಲಿನ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಸಭಾಭವನದಲ್ಲಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್‌ನ ಪದಾಧಿಕಾರಿಗಳ ಪ್ರಮುಖ ಸಭೆಯು ನವೆಂಬರ್ 4ರಂದು ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ಜರುಗಿತು.

ಸಭೆಯಲ್ಲಿ ಸಮಾಜದ ಯುವ ನಾಯಕರು ಹಾಗೂ ಪ್ರಭಾವಿ ಮುಖಂಡರಾದ ಶ್ರೀ ರಾಜಶೇಖರ ಕೋಟ್ಯಾನ್ ಅವರು ಭಾಗವಹಿಸಿ, ಟ್ರಸ್ಟ್‌ನ ಮುಂದಿನ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಾಚರಣೆಗಳ ಕುರಿತು ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡಿದರು. ಸಂಸ್ಥೆಯ ಮುನ್ನಡೆ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳಿಗೆ ನಿರಂತರವಾಗಿ ಬೆಂಬಲ ನೀಡುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದರು.



ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ವತಿಯಿಂದ ಶ್ರೀ ರಾಜಶೇಖರ ಕೋಟ್ಯಾನ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು ಸಂಸ್ಥೆಯ ಮುಂಬರುವ ಕಾರ್ಯಕ್ರಮಗಳ ರೂಪುರೇಷೆಗಳು ಹಾಗೂ ಅತ್ಯಾವಶ್ಯಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ನವೆಂಬರ್ 29ರಂದು ಬಾಲಾಲಯ ಪ್ರತಿಷ್ಠಾಪನೆ: ಧರ್ಮ ಚಾವಡಿಯ ದೈವಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸುವ ಧಾರ್ಮಿಕ ಕಾರ್ಯಕ್ರಮವು ನವೆಂಬರ್ 29, 2026ರಂದು ನೆರವೇರಲಿದ್ದು, ಈ ಪವಿತ್ರ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಟ್ರಸ್ಟ್‌ನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಕೋರಿದ್ದಾರೆ.















Related posts

ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ

Mumbai News Desk

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ

Mumbai News Desk

ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ಸುನೀಲ್ ಆಳ್ವ ಆಯ್ಕೆ

Mumbai News Desk

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ಮುಲ್ಕಿ ಅರಸು ಪ್ರಶಸ್ತಿ 2025 ಪ್ರಧಾನ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭ: ಪತ್ರಕರ್ತ ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ.

Mumbai News Desk