ಶಾಲಾ ಶಿಕ್ಷಣ ಇಲಾಖೆ ಉಡುಪಿ ಕಾರ್ಕಳ ಜ್ಞಾನಸುಧ ಅಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ
ಸಹಯೋಗದಲ್ಲಿ ಆಯೋಜಿಸಲಾದ 17ರ ವಯೋಮಾನದ ಬಾಲಕ-ಬಾಲಕಿಯರ ರಾಜ್ಯಮಟ್ಟದ ಚೆಸ್ ಪಂದ್ಯಾಟವನ್ನು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷರು ಉಮಾನಾಥ ಕಾಪು ಹಾಗೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ. ಅಶೋಕ್ ಕಾಮತ್ ಉದ್ಘಾಟಿಸಿದರು.
ಜ್ಞಾನಸುಧ ಸಂಸ್ಥೆಯ ಸಿಇಒ ದಿನೇಶ್ ಎಂ ಕೊಡವೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ , ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ ಉಪಸ್ಥಿತರಿದ್ದರು
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ ಪ್ರಾಸ್ತಾವನೆಗೈದರು.
ಕಾರ್ಕಳ ಜ್ಞಾನಸುಧ ಅಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ. ಸ್ವಾಗತಿಸಿದರು. ರಾಜ್ಯ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ ವಂದಿಸಿದರು .
.








































































