November 17, 2026
Mumbai News Kannada
ತುಳುನಾಡು

ಮೊಬೈಲ್ ಮೋಹದಲ್ಲಿ ಮರೆಯಾಗದಿರಲಿ ಪುಸ್ತಕ ಓದುವ ಹವ್ಯಾಸ: ಗ್ರಂಥಾಲಯಗಳತ್ತ ಯುವಜನತೆ ಮುಖಮಾಡಲಿ – ನಿತ್ಯಾನಂದ ಒಳಕಾಡು





















ಜಯ ಸಿ. ಪೂಜಾರಿ, ಕೆಳಾರ್ಕಳ ಬೆಟ್ಟು

ಉಡುಪಿ: ಜ್ಞಾನ ಸಂಪಾದನೆಗೆ ಗ್ರಂಥಾಲಯಗಳು ಮಹತ್ವದ ಕೇಂದ್ರಗಳಾಗಿವೆ. ಆದರೆ ಇಂದಿನ ದಿನಗಳಲ್ಲಿ ಮೊಬೈಲ್ ಬಳಕೆಯ ಗೀಳಿನಿಂದಾಗಿ ಪುಸ್ತಕ ಓದುವ ಹವ್ಯಾಸ ಹಾಗೂ ಓದಿನ ಮಹತ್ವ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಗ್ರಂಥಾಲಯಗಳ ಅಗತ್ಯತೆ ಮತ್ತಷ್ಟು ಹೆಚ್ಚಿದ್ದು, ಯುವಸಮುದಾಯ ಗ್ರಂಥಾಲಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಅಭಿಪ್ರಾಯಪಟ್ಟರು.



















ಉಡುಪಿ ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಗರ ಕೇಂದ್ರದ ಶಾಖಾ ಗ್ರಂಥಾಲಯದ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನ.14ರಂದು ಶನಿವಾರ ಆಯೋಜಿಸಿದ್ದ ಪುಸ್ತಕ ಪ್ರದರ್ಶನ ಹಾಗೂ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಓದಿನಿಂದ ಭಾಷಾ ಕೌಶಲ ವೃದ್ಧಿ







































































































ಯುವಸಾಹಿತಿ ತಾರಾನಾಥ ಮೇಸ್ತ ಶಿರೂರು ಮಾತನಾಡಿ, ಪುಸ್ತಕ ಓದುವ ಹವ್ಯಾಸದಿಂದ ಜ್ಞಾನ ವಿಸ್ತಾರವಾಗುವುದರ ಜೊತೆಗೆ ಚಿಂತನಾ ಶಕ್ತಿ, ಭಾಷಾ ಕೌಶಲ ಹಾಗೂ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತದೆ. ಮೊಬೈಲ್ ಮತ್ತು ಅಂತರ್ಜಾಲದ ಅತಿಯಾದ ಬಳಕೆಯಿಂದ ಹೊರಬಂದು ಯುವಜನತೆ ಪ್ರತಿನಿತ್ಯ ಸ್ವಲ್ಪ ಸಮಯವನ್ನಾದರೂ ಪುಸ್ತಕ ಓದಿಗೆ ಮೀಸಲಿಡಬೇಕು. ತಮ್ಮ ಸಮೀಪದಲ್ಲಿರುವ ಗ್ರಂಥಾಲಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಂಥಾಲಯ ಸಿಬ್ಬಂದಿಗಳಾದ ಆಶಾ, ಸಾಧನಾ ಅಂಚನ್, ವಿದ್ಯಾ ವಾಣಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಓದುಗರು ಉಪಸ್ಥಿತರಿದ್ದರು. ಗ್ರಂಥಾಲಯ ಸಹಾಯಕಿ ಸುನೀತಾ ಬಿ.ಎಸ್. ಕಾರ್ಯಕ್ರಮ ನಿರ್ವಹಿಸಿದರು.

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನ.20ರವರೆಗೆ ಪುಸ್ತಕ ಪ್ರದರ್ಶನ ಹಾಗೂ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನ ನಡೆಯಲಿದ್ದು, ಓದುಗರಲ್ಲಿ ಪುಸ್ತಕ ಪ್ರೀತಿಯನ್ನು ಬೆಳೆಸುವುದು ಮತ್ತು ಹೊಸ ಓದುಗರನ್ನು ಗ್ರಂಥಾಲಯದತ್ತ ಆಕರ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಹಿರಿ-ಕಿರಿಯರೆನ್ನದೆ ಎಲ್ಲರೂ ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಗ್ರಂಥಾಲಯದ ವತಿಯಿಂದ ಮನವಿ ಮಾಡಲಾಗಿದೆ.



Related posts

ವಿಜ್ಞಾನದಲ್ಲಿ ಪ್ರಯೋಗಶೀಲತೆ ಅತಿ ಮುಖ್ಯ: ಸುರೇಶ್ ಶೆಟ್ಟಿ ನಾಡಿಯಾಳು ಗುತ್ತು

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ: ಕರಾವಳಿಯ ಬಹುದಿನಗಳ ಕನಸು ನನಸು

Mumbai News Desk

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk

ಭಯ-ಭಕ್ತಿಯ ರೋಮಾಂಚನ: ಕಣ್ಮನ ಸೆಳೆದ ಕಾಪುವಿನ ಇತಿಹಾಸ ಪ್ರಸಿದ್ಧ ಪಿಲಿಕೋಲ

Mumbai News Desk

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ

Mumbai News Desk