ಮೀರಾ ರೋಡ್: ಮೀರಾಗಾವ್ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೀಪೋತ್ಸವವು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಆಡಳಿತ ಮೊಕ್ತೇಸರರಾದ ಬಾಬಾ ರಂಜನ್ ಶೆಟ್ಟಿಯವರ ಮುಂದಾಳತ್ವದಲ್ಲಿ ಜರುಗಲಿದೆ.
ಸಂಜೆ 6ರಿಂದ 8 ಗಂಟೆಯವರೆಗೆ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8ರಿಂದ ದೀಪೋತ್ಸವ, ರಂಗಪೂಜೆ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾದಿಗಳಾದ ತಾವೆಲ್ಲರೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು-ಮನ-ಧನದಿಂದ ಸಹಕರಿಸಿ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸ್ಥಾಪಕರಾದ ದಿ. ವಿಶ್ವನಾಥ ಪೂಂಜ ಪರಿವಾರದವರು, ಸ್ಥಾಪಕರಾದ ಕೃಷ್ಣ ಶೆಟ್ಟಿ, ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ದನ್ ಭಟ್, ಪ್ರಧಾನ ಅರ್ಚಕರಾದ ಸಾಂತಿಂಜ ಮಾಧವ್ ಭಟ್, ಶ್ರೀ ಮಹಾಲಿಂಗೇಶ್ವರ ಟ್ರಸ್ಟ್ ಸದಸ್ಯರು ಹಾಗೂ ಮೀರಾ ಸೊಸೈಟಿ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.





















