ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಘನ ಅಧ್ಯಕ್ಷತೆಯಲ್ಲಿ ಡಿಸೆಂಬರ್ 7ರಂದು ಕುರ್ಲ ಪೂರ್ವದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಂಸದ
ಗೋಪಾಲ್ ಸಿ.ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನೂತನವಾಗಿ ಆಯ್ಕೆಯಾದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಅಭಿನಂದಿಸಿ ಆಹ್ವಾನಿಸಿದರು,
ಈ ಸಂದರ್ಭದಲ್ಲಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್.ಕೆ ಶೆಟ್ಟಿ , ಕರ್ನೂರು ಮೋಹನ್ ರೈ ಮತ್ತು ಪ್ರವೀಣ್ ಶೆಟ್ಟಿ ವರಂಗ ಉಪಸ್ಥಿತರಿದ್ದರು.