23.2 C
Karnataka
April 5, 2025
ಸುದ್ದಿ

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್



ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್​ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ
ಮೃತ ಮಹಿಳೆಯ ಕುಟುಂಬಕ್ಕೆ ಸ್ವತಃ ಅಲ್ಲು ಅರ್ಜುನ್ 25ಲಕ್ಷ ರೂಪಾಯಿ ಪರಿಹಾರ ಘೋಶಿಸಿದ್ದರು, ಇದರ ನಡುವೆ ಇಂದು ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂದಿಸಿದ್ದು ಅಭಿಮಾನಿಗಳು ಶಾಕ್ ಆಗಿದ್ದಾರೆ. ಪುಷ್ಪ 2 ಒಂದೇ ವಾರದಲ್ಲಿ ಸಾವಿರ ಕೋಟಿ ದುಡ್ಡು ಮಾಡಿದ ಪುಷ್ಪ 2 ಸಿನಿಮಾವೇ ಅಲ್ಲು ಅರ್ಜುನ್ ಗೆ ಮುಳುವಾಗಿದೆ.

Related posts

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk

ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ

Mumbai News Desk

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (NGO); ಜಿಲ್ಲೆಯ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk