July 23, 2026
Mumbai News Kannada
ಸುದ್ದಿ

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,







ಉಡುಪಿ: ಅರಣ್ಯ ಕುರಿತಾದ ಅತ್ಯುತ್ತಮ ವರದಿಗಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಆರ್. ಎಲ್ ವಾಸುದೇವ ರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ  ಆಯ್ಕೆಗೊಂಡಿದ್ದು ಭಾನುವಾರ ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.ಕಳೆದ ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಕಾರ್ಕಳ ತಾಲೂಕು ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ವಿಜಯವಾಣಿಯಲ್ಲಿ  ಅರಣ್ಯ ಕುರಿತಾಗಿ ಮಾಡಿದ ವಿಶೇಷ ವರದಿಗಾಗಿ ಈ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಉಡುಪಿ ಜಿಲ್ಲಾ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಬಹುಮುಖ ಪ್ರತಿಭೆ : ಹರಿಪ್ರಸಾದ್ ನಂದಳಿಕೆ ಕಳೆದ 15 ವರ್ಷಗಳಿಂದ ಪತ್ರಿಕಾ ರಂಗದಲ್ಲಿ ದುಡಿಯುತ್ತಿದ್ದು ದೃಶ್ಯ ಮಾದ್ಯಮ ಸೇರಿದಂತೆ ವಿವಿಧ ಸಂಸ್ಥೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಅಲ್ಲದೆ ಓರ್ವ ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿರುವ ಇವರು ನಾನಾ ನಾಟಕ ತಂಡದಲ್ಲಿ ಪ್ರದಾನ ಪಾತ್ರವನ್ನು ಮಾಡಿ ಕಲಾಭಿಮಾನಿಗಳ ಮನ ರಂಜಿಸಿದ್ದಾರೆ. ಇತ್ತಿಚಿನ  ಕೆಲ ವರ್ಷಗಳಿಂದ ತುಳುವ ಸಿರಿ ಕಲಾವಿದರು ನಂದಳಿಕೆ ನಾಟಕ ತಂಡವನ್ನು ಕಟ್ಟಿಕೊಂಡು ನಾಟಕ ರಚನೆ, ನಿರ್ದೇಶನದ ಜೊತೆಗೆ ಕಲಾವಿದರಿಗೆ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ನಂದಳಿಕೆಯ ಗುರುದುರ್ಗಾ ಮಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾಗಿ, ಪತ್ರಕರ್ತರ ಸಂಘಟನೆಗಳ ತಾಲೂಕು ಹಾಗೂ ಜಿಲ್ಲಾ ಸದಸ್ಯರಾಗಿದ್ದು, ಉಡುಪಿ ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟದ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ರಂಗಭೂಮಿಯ ಸಾಧನೆಗಾಗಿ 2021 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಯುವ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಅಲ್ಲದೆ ಹತ್ತು ಹಲವು ಸಂಘ ಸಂಸ್ಥೆಗಳು ಇವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ.



Related posts

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ

Mumbai News Desk

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.

Mumbai News Desk