September 6, 2026
Mumbai News Kannada
ಸುದ್ದಿ

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ





ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​~ ಹೆಚ್ ಡುಂಡಿರಾಜ್

ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.

ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ ಸ್ಟೇ ಆವರಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಸಹಜವಾಗಿ ಬರೆದರೆ ಅದು ಕಾವ್ಯ ಮಯ, ಯಾರದೋ ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯ , ದೊಡ್ಡ ದೊಡ್ಡ ಶಬ್ದ, ಪ್ರಾಸ, ಛಂದಸ್ಸು, ಲಯಬದ್ಧವಾಗಿ ಬರೆದದ್ದೂ ಕೆಲವೊಮ್ಮೆ ಕವಿತೆಗಳಾಗೋದಿಲ್ಲ. ಕವಿತೆ ಸರಳವಾಗಿದ್ದು ಕೇಳುಗರ, ಓದುಗರ ಗಮನ ಸೆಳೆಯುವಂತಿರಬೇಕು. ಹಾಡು, ನಾಟಕ ಬರೆಯುವವರಿಗೆ ಇಂದು ​ಪ್ರೋತ್ಸಾಹ ವಿರಳವಾಗಿದೆ. ನಳ್ಳಿ ತಿರುಗಿಸಿದರೆ ನೀರು ಬರೋದಿಲ್ಲ. ಆದರೆ ವಾಟ್ಸ್ಯಾಪ್ ಆನ್ ಮಾಡಿದರೆ ನೂರಾರು ಕವಿತೆಗಳು ಬರುತ್ತವೆ​. ಕವಿತೆ ತಪಸ್ಸು, ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ಎಂದು ಹೇಳಿದರು.

​ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ​ಪ್ರೊಫಸರ್ ಶಂಕರ್, ಉದ್ಯಮಿ ವಿಶ್ವನಾಥ ಶೆಣೈ, ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪಸ್ಥಿತರಿದ್ದರು.
ಲಹರಿ ಪ್ರಾರ್ಥಿಸಿದರು. ಶಿಲ್ಪಾ ಜೋಶಿ ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ​ ಕಸಾಪ ಘಟಕ ಅಧ್ಯಕ್ಷ ರವಿರಾಜ​ ಎಚ್. ಪಿ. ಪ್ರಾಸ್ತಾವಿಕ ಮಾತನಾಡಿದರು. ಜನಾರ್ದನ ಕೊಡವೂರು ವಂದಿಸಿದರು.



Related posts

ಸದಾನಂದ ಪೂಜಾರಿ ಆಕಸ್ಮಿಕ ಸಾವು

Mumbai News Desk

ನ್ಯೂ ಪನ್ವೇಲ್ ನ ನಗರ ಸೇವಕ ಸಂತೋಷ್ ಜಿ ಶೆಟ್ಟಿ ಸಾಯೋಗದಲ್ಲಿ ಶ್ರೀ ಜೈ ಅಂಬೇ ಮಾತಾ ಮಂದಿರ ದ ಮೈದಾನದಲ್ಲಿ  ಶ್ರೀ ರಾಮ ಮಹೋತ್ಸವ ಸಂಭ್ರಮ ಆಚರಣೆ .

Mumbai News Desk

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ.

Mumbai News Desk

ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್, ಯಕ್ಷ ಸಂಭ್ರಮ 2023

Mumbai News Desk

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk

ಮುಂಬೈ ಲೋಕಲ್ ಟ್ರೈನ್ ಕೊಲೆ: ಸಿಸಿಟಿವಿ ದೃಶ್ಯದಲ್ಲಿದ್ದ ಒಂದೇ ಒಂದು ಲೋಗೋ ತಂದುಕೊಟ್ಟಿತು ಮಂಗಳೂರು ಮೂಲದ ಕೊಲೆಗಾರನ ಸುಳಿವು!

Mumbai News Desk