29 C
Mumbai
August 12, 2026
Mumbai News Kannada
ಸುದ್ದಿ

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ





ಸುದೀರ್ಘ 12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಬಿಸಿಬಿಸಿ ಚರ್ಚೆ ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧ ನಡುವೆ ರಾಜ್ಯಸಭೆಯು ವಕ್ಫ್ (ತಿದ್ದುಪಡಿ) ಮಸೂದೆ, 2025 ನ್ನು ಅಂಗೀಕರಿಸಿತು.

ರಾಜ್ಯಸಭೆಯಲ್ಲಿ, ಮಸೂದೆಯ ಪರವಾಗಿ 128 ಮತಗಳು ಮತ್ತು ವಿರೋಧವಾಗಿ 95 ಮತಗಳು ಚಲಾವಣೆಯಾದವು. ವಕ್ಫ್ ಮಂಡಳಿಗೆ ತಿದ್ದುಪಡಿ ತರಲು ಕೋರುವ ಮಸೂದೆಯು ಮುಸಲ್ಮಾನ ಸಮುದಾಯಗಳಿಗೆ ಯಾವುದೇ ಹಾನಿ ಮಾಡುವುದಿಲ್ಲ ಬದಲಿಗೆ ಅವರಿಗೆ ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ತಿದ್ದುಪಡಿ ಮಸೂದೆ ಬಗ್ಗೆ ನಿನ್ನೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಚರ್ಚೆ ಆರಂಭವಾಗಿ ಇಂದು ನಸುಕಿನ ಜಾವದವರೆಗೆ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಸತತ ಚರ್ಚೆಗಳು ನಡೆದವು. ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕಾರಕ್ಕಾಗಿ ಮಂಡಿಸುವ ಮೊದಲು, ವಕ್ಫ್ ಆಸ್ತಿಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲಾಗಿಲ್ಲ ಎಂದು ರಿಜಿಜು ಒತ್ತಿ ಹೇಳಿದರು.

ವಕ್ಫ್ ಮಂಡಳಿ ಯಾವಾಗಲೂ ಹಾಗೆಯೇ ಇರುತ್ತದೆ. ವಕ್ಫ್ ಮಂಡಳಿಯು ಶಾಸನಬದ್ಧ ಸಂಸ್ಥೆಯಾಗಿದ್ದು, ಮುಸ್ಲಿಮರನ್ನು ಮಾತ್ರ ಶಾಸನಬದ್ಧ ಸಂಸ್ಥೆಯಲ್ಲಿ ಏಕೆ ಸೇರಿಸಬೇಕು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಿವಾದವಿದ್ದರೆ, ಆ ವಿವಾದವನ್ನು ಹೇಗೆ ಪರಿಹರಿಸಲಾಗುತ್ತದೆ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರೊಂದಿಗೆ ವಿವಾದಗಳೂ ಇರಬಹುದಲ್ಲವೇ ಎಂದು ಕೇಳಿದರು.

ಶಾಸನಬದ್ಧ ಸಂಸ್ಥೆಯು ಎಲ್ಲಾ ಧರ್ಮಗಳ ಪ್ರತಿನಿಧಿಗಳನ್ನು ಒಳಗೊಂಡ ಜಾತ್ಯತೀತ ಸಂಸ್ಥೆಯಾಗಿರಬೇಕು ಎಂದು ರಿಜಿಜು ವಾದಿಸಿದರು. ನಂತರ ಮಸೂದೆಯನ್ನು ರಾಜ್ಯಸಭೆಯಲ್ಲಿ ಷರತ್ತು-ಅನುಬಂಧದ ಆಧಾರದ ಮೇಲೆ ಮತಕ್ಕೆ ಹಾಕಲಾಯಿತು.

ಇದಕ್ಕೂ ಮೊದಲು, ಕೇಂದ್ರ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ವಕ್ಫ್ (ತಿದ್ದುಪಡಿ) ಮಸೂದೆ 2025 ನ್ನು ರಾಜ್ಯಸಭೆಯಲ್ಲಿ ಮಂಡಿಸಿದರು, ಆಡಳಿತಾರೂಢ ಎನ್‌ಡಿಎ ಈ ಶಾಸನವನ್ನು ಅಲ್ಪಸಂಖ್ಯಾತರಿಗೆ ಪ್ರಯೋಜನಕಾರಿ ಎಂದು ಸಮರ್ಥಿಸಿಕೊಂಡರೆ, ಪ್ರತಿಪಕ್ಷಗಳು ಇದನ್ನು ಮುಸ್ಲಿಂ ವಿರೋಧಿ ಎಂದು ಕರೆದವು.

ಲೋಕಸಭೆಯಲ್ಲಿ, ವಿರೋಧ ಪಕ್ಷದ ಸದಸ್ಯರು ತಂದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತಗಳಿಂದ ತಿರಸ್ಕರಿಸಿದ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಮತಗಳ ವಿಭಜನೆಯಲ್ಲಿ 288 ಸದಸ್ಯರು ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರು.



Related posts

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ಉಡುಪಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Mumbai News Desk

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.

Mumbai News Desk