
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆ ಎಸ್ ಕೋಡಿ, ತೋಕೂರು ವತಿಯಿಂದ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ 2025ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ದೀಪ ಪ್ರಜ್ವಲನೆಗೊಳಿಸಿ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್. ಕೋಡಿ ಇದರ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರು ವಹಿಸಿದ್ದರು,
ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಶ್ರೀ ಜಯಾನಂದ ಎನ್. ಸುವರ್ಣರವರು ದೀಪ
ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಗುರುರಾಜ್ ಎಸ್. ಪೂಜಾರಿ, ಮಹಿಳಾ ವೇದಿಕೆಯ ಉಪಾಧ್ಯಕ್ಷರಾದ ಶ್ರೀಮತಿ ಅಮಿತಾ ದಿನಕರ್ ಸಾಲ್ಯಾನ್, ಯುವ ವೇದಿಕೆಯ ಸದಸ್ಯರಾದ ಶ್ರೀ ಲೋಹಿತ್ ರವರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಮುಲ್ಕಿಯ ನ್ಯಾಯವಾದಿಗಳಾದ ಶ್ರೀ ರವೀಶ್ ಕಾಮತ್ ರವರು ವ್ಯಕ್ತಿತ್ವ ವಿಕಸನ ಮತ್ತು ನೀತಿ ಶಿಕ್ಷಣದ ಬಗ್ಗೆ ವಿವರಿಸಿ ಹೇಳಿದರು.
ನೃತ್ಯ ಕಲಿಕೆಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಶ್ರೀಮತಿ ನೀಮಾ ಸನಿಲ್ ಹಳೆಯಂಗಡಿಯವರು ಮಕ್ಕಳಿಗೆ ನೃತ್ಯ ಶಿಕ್ಷಣವನ್ನು ನೆರವೇರಿಸಿ ಕೊಟ್ಟರು
ಕಾರ್ಯಕ್ರಮದಲ್ಲಿ ಶ್ರೀಮತಿ ಕುಶಲ ಎಸ್. ಕುಕ್ಯಾನ್ ರವರು ಪ್ರಾರ್ಥಿಸಿ, ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳಾದ ಶ್ರೀಮತಿ ಸುನೀತಾ ಗುರುರಾಜ್ ರವರು ಸ್ವಾಗತಿಸಿ, ಬಬಿತಾ ಜೆ. ಸುವರ್ಣರವರು ವಂದನಾರ್ಪಣೆಗೈದರು
ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು ಕಾರ್ಯಕ್ರಮವನ್ನು ನಿರೂಪಿಸಿದರು.