September 6, 2026
Mumbai News Kannada
ಸುದ್ದಿ

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ





ಮಂಗಳೂರಿನಲ್ಲಿ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಹಲವು ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಮೇಲೆ ತಲವಾರು ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದೆ. 2022ರ ಜುಲೈ 28ರಂದು ಸುರತ್ಕಲ್ ನ ಫಾಜಿಲ್ ಹತ್ಯೆ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ಮಾಡಿದ್ದರು. ಇದರಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು. ಸುಹಾಸ್‌ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು. ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಇನ್ನು ಸುಹಾಸ್ ಶೆಟ್ಟಿ ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದನು.

ಇಂದು ಸಂಜೆ ನಡೆದ ದಾಳಿಯಿಂದ ಗಂಭೀರ ಸ್ಥಿತಿಯಲ್ಲಿರುವ ಸುಹಾಸ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ದಾಖಲು ಮಾಡಲಾಗಿತ್ತು.. ಆದರೆ, ತಲವಾರು ದಾಳಿಗೆ ತುತ್ತಾಗಿದ್ದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾರೆ. ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ‌‌ ಆಸ್ಪತ್ರೆ ಎದುರು ಹಿಂದೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಮತ್ತು ಹಿಂದೂ ಸಂಘಟನೆ ನಾಯಕರ ಆಗಮಿಸಿದ್ದಾರೆ

.



Related posts

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ನೆಲೆ ಫೌಂಡೇಶನ್ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ : ಮೂಲತ್ವ ಪೌಂಡೇಶನ್ ನ ಕಾರ್ಯ ಶ್ಲಾಘನೀಯ – ಆರ್ ಎಸ್ ಎಸ್ ಮುಖಂಡ ವಾಮನ್ ಶೆಣೈ ಅಭಿಮತ

Mumbai News Desk

ಉದ್ಯಮಿ ಕಾಂತಿ ಶೆಟ್ಟಿಯವರಿಗೆ ‘ಉದ್ಯೋಗ ಯೋಗದಾನ ಪುರಸ್ಕಾರ’

Mumbai News Desk

ಶಷಾಂಕ್ ಅಶೋಕ್ ಐಲ್, ಸಿಎ ಉತ್ತೀರ್ಣ

Mumbai News Desk

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk

ಜುಲೈ 9 : ಗಣೇಶಪುರಿಯಲ್ಲಿ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿಗಳ ಮೂರ್ತಿ ಪುನರ್ ಪ್ರತಿಷ್ಠಾಪನೋತ್ಸವ: ಭಕ್ತರಿಗೆ ಅಪೂರ್ವ ದರ್ಶನದ ಸೌಭಾಗ್ಯ

Mumbai News Desk