July 23, 2026
Mumbai News Kannada
ಸುದ್ದಿ

ಕರ್ನಾಟಕ : ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್







ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ದಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ಪೊಲೀಸರು ಮತ್ತು ಗ್ರಹ ಇಲಾಖೆ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲಿ ಈ ಬೆಳವಣಿಗೆ ನಡೆಯುತ್ತಿದೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15 ಮಂದಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲೆಯಾದ ಬೆನ್ನಲ್ಲಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ವಿರುದ್ಧ ಗಡಿಪಾರು ನೋಟಿಸ್ ನೀಡಲಾಗಿದೆ.
ಕರ್ನಾಟಕ ಪೊಲೀಸ್ ಆದಿ ನಿಯಮ 1963 ಕಾಯ್ದೆ ಕಲಂ : 58 ರಡಿ ನೋಟಿಸ್ ಜಾರಿ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲ್ಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಪುತ್ತಿಲ ಅವರನ್ನು ಗಡಿಪಾರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಭಾಷಣ ಮಾಡುವವರ ಹಾಗೂ ಕೋಮು ಪ್ರಚೋದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಖಡಕ್ ಸೂಚನೆ ನೀಡಿದ್ದರು.ಇದರ ಬೆನ್ನಲ್ಲೇ ಹಿಂದು ಮುಖಂಡರ ವಿರುದ್ಧ ಕ್ರಮ ಆರಂಭವಾಗಿದೆ. ಆದರೆ ಅರುಣ್ ಪುತ್ತಿಲಗೆ ಯಾವ ಕಾರಣಕ್ಕಾಗಿ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ನಲ್ಲಿ ಉಲ್ಲೇಖಿಸಿಲ್ಲ.



Related posts

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಐಸಿಎಸ್ ಸಿ  10 ತರಗತಿಯ ಫಲಿತಾಂಶ – ಪೂರ್ಣ ಶ್ರೀಧರ ಭಂಡಾರಿ.ಶೇ  98.2% ಅಂಕ 

Mumbai News Desk

ತೋಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಅಮೃತ ವರ್ಷಿಣಿ ” ಉದ್ಘಾಟನೆ

Mumbai News Desk

ಮಂಗಳೂರಿನ ರೈಲು ಬಳಕೆದಾರರ ದೀರ್ಘ ಕಾಲದ ಬೇಡಿಕೆಗಳ ಈಡೇರಿಕೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ರೈಲ್ವೆ ಪ್ರಯಾಣಿಕರ ಸಮಿತಿ ಒತ್ತಾಯ.

Mumbai News Desk

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk