30 C
Mumbai
April 24, 2026
Mumbai News Kannada
ಸುದ್ದಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು





ಬೆಂಗಳೂರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರೀ ದುರಂತ ಸಂಭವಿಸಿದ್ದು. ಈ ದುರಂತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 11ಜನ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಬೆಂಗಳೂರಿಗೆ ಆರ್‌ಸಿಬಿ ತಂಡವು ಬಂದಿದ್ದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಾಲ್ತುಳಿತ ದುರಂತ ಆಘಾತವನ್ನುಂಟು ಮಾಡಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮೊದಲ ಬಾರಿ ಐಪಿಎಲ್‌ ಟ್ರೋಫಿಯನ್ನು ಗೆದ್ದಿದೆ. ಆದರೆ, ಈ ಸಂಭ್ರಮಾಚರಣೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಬೆಂಗಳೂರಿಗೆ ಆರ್‌ಸಿಬಿ ತಂಡ ಬರಲಿದೆ ಎಂದು ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಜನ ಸೇರಿದ್ದರು. ಸಾವಿರಾರು ಜನರನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಲಿಲ್ಲ. ಬೆಂಗಳೂರು ಪೊಲೀಸರು ಆರ್‌ಸಿಬಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ವಿಧಾನಸೌಧದ ಬಳಿ ಬರಬಾರದು ಎಂದು ಹೇಳಿದ್ದರೂ. ಸಾವಿರಾರು ಜನ ಅಭಿಮಾನಿಗಳು ವಿಧಾನಸೌಧದ ಬಳಿ ಬಂದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಎಂಟ್ರಿಯಲ್ಲಿ ಭಾರೀ ನೂಕುನುಗ್ಗಲು ಸೃಷ್ಟಿಯಾಗಿದ್ದು ಕಾಲ್ತುಳಿತವಾಗಿದೆ.

ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಮುಂದುವರಿದಿದೆ. ಗಾಯಗೊಂಡವರನ್ನು ಬೆಂಗಳೂರಿನ ಪೊಲೀಸರು ಎತ್ತುಕೊಂಡು ಓಡಿ ಹೋಗುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಮನಕಲಕುವಂತೆ ಇವೆ.

ಅಭಿಮಾನಿಗಳು ಸಂತೋಷದಿಂದ ಕುಣಿದಾಡುತ್ತಿರುವಾಗಲೇ ಈ ದುರಂತ ಸಂಭವಿಸಿದೆ. ಭಾರೀ ಜನ ಸೇರಲಿದ್ದಾರೆ ಎನ್ನುವ ಕಾರಣಕ್ಕೆ ತೆರೆದ ಬಸ್‌ನಲ್ಲಿ ಮೆರವಣಿಗೆಯನ್ನು ರಾಜ್ಯ ಸರ್ಕಾರವು ರದ್ದುಪಡಿಸಿತ್ತು. ಕಾನೂನು ಹಾಗೂ ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಯನ್ನು ರದ್ದುಪಡಿಸಿರುವುದಾಗಿ ಹೇಳಲಾಗಿತ್ತು.



Related posts

2023-24 ನೇ ಸಾಲಿನ ಎಚ್ ಎಸ್ ಸಿ ಪರೀಕ್ಷೆ ಯಲ್ಲಿ ನಿಶಾ ಸುಂದರ ಪೂಜಾರಿ 82.16%

Mumbai News Desk

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಅರಬ್ಬಿ ಸಮುದ್ರದ ಅಲೆಗಳನ್ನು ಗೆದ್ದ ಮುಂಬೈ ಹುಡುಗಿ: 5 ಕಿ.ಮೀ ಈಜಿ ದಾಖಲೆ ಬರೆದ ದಿಶಿತಾ ಚಂದ್ರಶೇಖರ್ ಪೂಜಾರಿ

Mumbai News Desk

ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆ

Mumbai News Desk