September 6, 2026
Mumbai News Kannada
ಸುದ್ದಿ

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.






ಮುಂಬಯಿ: ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿಯವರು ಜೂ 4ರಂದು ಸಂಜೆ 7:40 ಕ್ಕೆ ಮುಂಬೈಯಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.

ಮೃತರು ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರದ ಗೌರವಾಧ್ಯಕ್ಷರು, ಶ್ರೀನಾರಾಯಣಗುರು ಏಜ್ಯುಕೇಶನಲ್‌&ಕಲ್ಬರಲ್ ಟ್ರಸ್ಟ್ ಕುಂದಾಪುರದ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. ಸಮಾಜದ ಅಶಕ್ತರು ಕೂಡ ಅತ್ಯುತ್ತಮವಾದ ಕಲ್ಯಾಣ ಮಂಟಪದಲ್ಲಿ ವಿವಾಹವನ್ನು ನಡೆಸಬೇಕು ಎಂದು 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸಿ ಬಡವರ ಬೆಳಕಾಗಿದ್ದರು, ವಿಧ್ಯೆಗೆ ಬಹಳಷ್ಟು ಒತ್ತು ನೀಡಿದ್ದ ಅವರು ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.



Related posts

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಥಾಣೆ ನೇತ್ರಾವತಿ ಎಸ್.ಅಮೀನ್ ನಿಧನ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

Mumbai News Desk

ಜಯಪ್ರಕಾಶ್ ಪೂಜಾರಿ, ಮುಂಬೈ ಅವರಿಗೆ ತುಳುವರ್ಲ್ಡ್ ಸಮ್ಮಾನ್

Mumbai News Desk

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk