July 22, 2026
Mumbai News Kannada
ಸುದ್ದಿ

ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ, 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಪರ್ಧಿಗಳಿದ್ದ ಕಣದಲ್ಲಿ ರಾಜ್ಯಕ್ಕೆ ಪ್ರಶಸ್ತಿ ಗೆದ್ದು ಕೊಟ್ಟ ಏಕೈಕ ಸಾಧಕಿ







ಮಂಗಳೂರು: ಹೊಸದಿಲ್ಲಿಯ ಲೀಲಾ ಪ್ಯಾಲೇಸ್‌ನಲ್ಲಿ ಜುಲೈ 12 ರಂದು ಗ್ಲಾಮರ್ ಗುರ್ಗಾಂವ್ ಆಯೋಜಿಸಿದ್ದ ಮಿಸ್ಸ್ ವಲ್ಡ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಮಂಗಳೂರಿನ ಮೈತ್ರಿ ಮಲ್ಲಿ ಅವರು ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ ಗೆಲ್ಲುವ ಮೂಲಕ ಕರಾವಳಿ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಇದು ಕರ್ನಾಟಕ ರಾಜ್ಯ ಗೆದ್ದ ಏಕೈಕ ಪ್ರಶಸ್ತಿಯಾಗಿದೆ. ದುಬೈ, ಆಸ್ಟ್ರೇಲಿಯಾ, ಲಂಡನ್, ಯುಎಸ್‌ಎ ಮುಂತಾದ ಅನೇಕ ದೇಶಗಳ ಸ್ಪರ್ಧಿಗಳು ಇದರಲ್ಲಿ ಭಾಗವಹಿಸಿದ್ದರು. ಮೈತ್ರಿ ಅವರ ವಿಭಾಗದಲ್ಲಿ 200ಕ್ಕೂ ಹೆಚ್ಚು ಸ್ಪರ್ಧಿಗಳಿದ್ದರು.
ಮೈತ್ರಿ ಮಲ್ಲಿ ಅವರು ದಿ. ಬನ್ನಂಪಳ್ಳಿ ಮಧುಕರ್ ಮಲ್ಲಿ ಮತ್ತು ಅಂಜಾರ ಬೀಡು ವಿಜಯಲಕ್ಷ್ಮಿ ಎಂ. ಮಲ್ಲಿ ಅವರ ಪುತ್ರಿ ಹಾಗೂ ವಿಕಾಸ್ ಮನೋಹರ್ ಅವರ ಪತ್ಮಿ. ಮೋಹಿತ್ ಮಲ್ಲಿಯವರ ಸಹೋದರಿ.
ಎಂಬಿಎ, ಎಂಜಿನಿಯರ್ ಪದವೀಧರರಾಗಿರುವ ಇವರು ಅಟೊಮ್ ಫಿಟ್ನೆಸ್ ಕ್ಲಬ್ ಮಂಗಳೂರಿನ ಸಹ-ಸಂಸ್ಥಾಪಕಿಯೂ ಆಗಿದ್ದಾರೆ.

ಮೈತ್ರಿ ಮಲ್ಲಿ ಅವರು ಈ ಹಿಂದೆಯೂ ಅನೇಕ ಪ್ರಶಸ್ತಿ ಗೆದ್ದಿದ್ದಾರೆ. 2003 ರಲ್ಲಿ ಮಿಸ್ ಮ್ಯಾಂಗಲೂರು, ಮತ್ತು 2012 ರಲ್ಲಿ ಮಿಸ್ ಬಂಟ್ ವರ್ಲ್ಡ್ ಕಿರೀಟ ಗೆಲ್ಲುವ ಮೂಲಕ ಈ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದರು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್ ಕೂಡ ಆಗಿರುವ ಮೈತ್ರಿ ಅವರು ಅತ್ಯುತ್ತಮ ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ.

B. Dinesh Kulal
Mob.: 9821868674



Related posts

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk

ಹೊಸ ಹಣಕಾಸು ವರ್ಷ 2026-27: ಜನಸಾಮಾನ್ಯರ ಬದುಕಿನ ಮೇಲಾಗುವ ಪ್ರಮುಖ ಬದಲಾವಣೆಗಳ ಕೈಪಿಡಿ

Mumbai News Desk

ಚೀನಾದ ಎಮ್‌.ಡಿ.ಆರ್‌.ಟಿ. ಗ್ಲೋಬಲ್ ಕಾನ್ಫರೆನ್ಸ್‌ನಲ್ಲಿ ಡಾ. ಆರ್. ಕೆ. ಶೆಟ್ಟಿ ಭಾಷಣ

Mumbai News Desk