July 23, 2026
Mumbai News Kannada
ಮುಂಬಯಿ

ಯುವಕರು ದೇಶಪ್ರೇಮ ಹಾಗು ಸಾಮಾಜಿಕ ಹೊಣೆಗಾರಿಕೆ ಬೆಳೆಸಿಕೊಳ್ಳಬೇಕು ಎಂದು ಕಾರ್ಯಧ್ಯಕ್ಷ ಕೆ ಎಚ್ ದೇಶಪಾಂಡೆ ಕರೆ: ಜೆ.ವಿ.ಎಂ. ಮೆಹತಾ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ







ಐರೋಲಿ, ನವಿ ಮುಂಬೈ – ಐರೋಲಿಯ ಮೆಹತಾ ಮಹಾವಿದ್ಯಾಲಯದಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ಉತ್ಸಾಹದಿಂದ ಆಚರಿಸಲಾಯಿತು. ಜೆ.ವಿ.ಎಂ. ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷರಾದ ಶ್ರೀ ಕೆ.ಎಚ್. ದೇಶಪಾಂಡೆ ಅವರಿಂದ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀ ವಿ. ಎನ್ ಹೆಗ್ಡೆ, ಉಪಾಧ್ಯಕ್ಷ ಅಡ್ವೊ. ಎಸ್.ಪಿ. ಕುಲಕರ್ಣಿ, ಕೋಶಾಧಿಕಾರಿ ಶ್ರೀ ಅವಿನಾಶ ಖಿಲಾರಿ, ಕಾರ್ಯನಿರ್ವಾಹಕ ಸಮಿತಿಯ ಸದಸ್ಯರಾದ ಶ್ರೀ ರಾಹುಲ್ ಮಾಂಗಲೆ, ಶ್ರೀ ಅವಧೂತ ಅಖ್ಲೇಕರ್, ಶ್ರೀ ಸತೀಶ ಖಿಲಾರಿ, ಶ್ರೀ ಸಮರ್ ಟಂಕಸಾಲಿ, ಶ್ರೀ ರಮೇಶ್ ಪಾಟೀಲ್, ಶ್ರೀ ಆರ್.ಜೆ. ಪಾಟೀಲ್, ಶ್ರೀಪಾಂಡುರಂಗ ಮಿರ್ಜಿ, ಜ್ಞಾನ ವಿಕಾಸ ಮಂಡಲದ ಹಲವಾರು ಹಿರಿಯ ಸದಸ್ಯರು ಮತ್ತು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಿ.ಆರ್. ದೇಶಪಾಂಡೆ ಉಪಸ್ಥಿತರಿದ್ದರು.
‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ, ಸ್ವಾತಂತ್ರ್ಯ ದಿನದಂದು ಕಿರಿಯ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ‘ಭಾರತ್ ಮಾತಾ ಕಿ ಜೈ’, ‘ಹರ್ ಘರ್ ತಿರಂಗಾ’, ‘ವಂದೇ ಮಾಟರಂ’, ‘ಜೈ ಜವಾನ್ ಜೈ ಕಿಸಾನ್’ ಎಂಬ ಘೋಷಣೆಗಳೊಂದಿಗೆ ಪ್ರಭಾತಫೇರಿ ನಡೆಸಿದರು. ಧ್ವಜಾರೋಹಣದ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಪಥಸಂಚಲನ ನಡೆಸಿ ಧ್ವಜಕ್ಕೆ ಗೌರವ ಸಲ್ಲಿಸಿದರು.


ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷ ಶ್ರೀ ಕೆ.ಎಚ್. ದೇಶಪಾಂಡೆ ಅವರು ತಮ್ಮ ಭಾಷಣದಲ್ಲಿ ಯುವಕರಿಗೆ ಮಾರ್ಗದರ್ಶನ ನೀಡಿದರು. ಯುವಕರು ಮೊಬೈಲ್, ಸಾಮಾಜಿಕ ಮಾಧ್ಯಮಗಳಂತಹ ವ್ಯಸನಗಳಿಂದ ದೂರವಿದ್ದು ಆರೋಗ್ಯವಂತ ಹಾಗೂ ದೀರ್ಘಾಯುಷಿ ಜೀವನವನ್ನು ಸಾಗಿಸಬೇಕು. ಇದನ್ನು ಅವರು ದೀರ್ಘಾಯುಷ್ಯ ಪಡೆದ ಜಪಾನಿನ ಗ್ರಾಮದ ಉದಾಹರಣೆ ಮೂಲಕ ವಿವರಿಸಿದರು.
ಸಂಸ್ಥೆಯ ಅಧ್ಯಕ್ಷ ಶ್ರೀ ವಿಎನ್ ಹೆಗ್ಡೆ ಅವರು ಸಹ ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು. ಅವರು ವಿದ್ಯಾರ್ಥಿಗಳಿಗೆ ಜಂಕ್ ಫುಡ್‌ನಿಂದ ದೂರವಿರುವಂತೆ ಮತ್ತು ತಂಬಾಕು, ಡ್ರಗ್ಸ್ ಮುಂತಾದ ವ್ಯಸನಗಳಿಂದ ದೂರವಿರುವ ಪ್ರತಿಜ್ಞೆ ತೆಗೆದುಕೊಳ್ಳುವ ಸಲಹೆ ನೀಡಿದರು.
ಮಹಾವಿದ್ಯಾಲಯದ ಸಭಾಂಗಣದಲ್ಲಿ, ಕಿರಿಯ ಮತ್ತು ಪದವಿ ತರಗತಿಯ ವಿದ್ಯಾರ್ಥಿಗಳು ದೇಶಭಕ್ತಿಯಿಂದ ಪ್ರೇರಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ತಮ್ಮ ದೇಶಪ್ರೇಮವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಿರಿಯ ಮತ್ತು ಪದವಿ ಮಹಾವಿದ್ಯಾಲಯದ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಬಹುತೇಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಧ್ವಜಾರೋಹಣ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಧಾರ್ಮಿಕ ಸಭೆ

Mumbai News Desk

ಒಕ್ಕಲಿಗರ ಸಂಘದ ಮಹಾರಾಷ್ಟ್ರ ಪದಾಧಿಕಾರಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ, ಮುಂಬೈಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭರವಸೆ

Mumbai News Desk

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.

Mumbai News Desk

ಭಾಯಂದರ್ ಆರಾಧನಾ ಫ್ರೆಂಡ್ಸ್ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗದ ಆಯೋಜನೆಯಲ್ಲಿ ಸರಣಿ ತಾಳಮದ್ದಳೆಯ ದಶಮ ಪ್ರಸ್ತುತಿ: ಕಲಾವಿದರಿಗೆ ಸನ್ಮಾನ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ – ವಾರ್ಷಿಕ ವಿಹಾರ ಕೂಟ

Mumbai News Desk