September 6, 2026
Mumbai News Kannada
ಸುದ್ದಿ

ಉಡುಪಿ: ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರಿಕೆ ಬಿಡುಗಡೆ





ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ, ಯುವಜನತೆಯಲ್ಲಿ ಅವರ ತತ್ವ ಮತ್ತು ಆದರ್ಶಗಳ ಬಗ್ಗೆ ಅರಿವು ಮೂಡಿಸಲು `ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ’ ಆಯೋಜಿಸಲಾಗಿದೆ. ಈ ಜಾಥಾದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ನಡೆಯಿತು.

​ಕಾರ್ಯಕ್ರಮದಲ್ಲಿ ರಘು ಪೂಜಾರಿ ಕಲಂಜೆ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾಥಾಗೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರವೀಣ್ ಎಂ. ಪೂಜಾರಿ ಅವರು ಜಾಥಾದ ಉದ್ದೇಶ ಮತ್ತು ಆಯೋಜನೆಯ ಕುರಿತು ಪ್ರಸ್ತಾವನೆ ಸಲ್ಲಿಸಿದರು.

​ಈ ಸಂದರ್ಭದಲ್ಲಿ ಯುವ ವೇದಿಕೆಯ ಗೌರವಾಧ್ಯಕ್ಷ ದಿವಾಕರ ಸನಿಲ್, ಬನ್ನಂಜೆ ಬಿಲ್ಲವರ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಮಲ್ಪೆ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ್ ಕರ್ಕೇರ, ಮಣಿಪಾಲ ಸೀತಾ ಲಾಜಿಸ್ಟಿಕ್‌ನ ಮಾಲಿಕ ಪ್ರವೀಣ್ ಪೂಜಾರಿ ಹಿರೇಬೆಟ್ಟು, ಮಾರ್ಪಳ್ಳಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷ ಸಂಜೀವ ಕೆ. ಪೂಜಾರಿ, ಬೊಳ್ವೆ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷ ದಿನೇಶ್ ಎಂ. ಸಾಲ್ಯಾನ್, ಶ್ರೀ ನಾರಾಯಣಗುರು ಯುವ ವೇದಿಕೆ ಅಧ್ಯಕ್ಷ ಮಿಥುನ್ ಪೂಜಾರಿ, ಸಂತೆಕಟ್ಟೆ-ಕಲ್ಯಾಣಪುರ ಬಿಲ್ಲವ ಸಂಘದ ಅಧ್ಯಕ್ಷ ಶೇಖರ್ ಗುಜ್ಜರಬೆಟ್ಟು, ಮಣಿಪುರ ಬಿಲ್ಲವ ಸಂಘದ ಅಧ್ಯಕ್ಷ ನಟರಾಜ ಪೂಜಾರಿ, ಉದ್ಯಾವರ ಬಿಲ್ಲವ ಸಂಘದ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಇಂದಿರಾನಗರ-ಕುಕ್ಕಿಕಟ್ಟೆ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ, ಮೂಡನಿಡಂಬೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರ ಸಮಿತಿ ಜತೆಕಾರ್ಯದರ್ಶಿ ಸಂದೀಪ್ ಸನಿಲ್, ನಿರ್ದೇಶಕ ಹಾಗೂ ಚಿತ್ರನಟ ಸೂರ್ಯೋದಯ ಪೆರಂಪಳ್ಳಿ, ತೋನ್ಸೆ ಶ್ರೀ ಬ್ರಹ್ಮಬೈದರ್ಕಳ ಪಂಚ ಧೂಮಾವತಿ ಗರೋಡಿ ಅಧ್ಯಕ್ಷ ಹರೀಶ್ ಕುಮಾರ್, ನಿಡಂಬಳ್ಳಿ, ಪಕ್ಕಿಬೆಟ್ಟು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಪಡುಮನೆ, ಕಿದಿಯೂರು ಬಿಲ್ಲವ ಸಂಘದ ಅಧ್ಯಕ್ಷ ಸುಧಾಕರ್ ಕಲ್ಯಾಡಿ, ದೆಂದೂರು ಕಲಂಜೆ ಬಿಲ್ಲವ ಸಂಘದ ಅಧ್ಯಕ್ಷ ಸುಧಾಕರ್ ಪೂಜಾರಿ ದೆಂದೂರು, ಬಿಎಸ್‌ಎನ್‌ಡಿಪಿ ಜಿಲ್ಲಾಧ್ಯಕ್ಷ ಶ್ರೀಧರ್ ಅಮೀನ್, ಯೂತ್ ಬಿಲ್ಲವ ಮೂಡುಬೆಳ್ಳೆ ಅಧ್ಯಕ್ಷ ತಿಲಕ್‌ ರಾಜ್ ಪೂಜಾರಿ, ಕೆಸ್ತೂರು ಬಿಲ್ಲವ ಸಂಘದ ಅಧ್ಯಕ್ಷ ದೀಪಕ್ ಸನಿಲ್, ಇನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ್ ಅಮೀನ್, ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷೆ ಪ್ರತಿಮಾ ವಿ. ಪೂಜಾರಿ, ಬಿಲ್ಲವ ಯುವ ವೇದಿಕೆಯ ಗೌರವ ಸಲಹೆಗಾರರು, ಗುರು ಸಂದೇಶ ಜಾಥಾ ಸಂಚಾಲಕರು ಮತ್ತು ಸಮಾಜದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

​ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಜಿಲ್ಲಾ ಬಿಲ್ಲವ ಯುವ ವೇದಿಕೆಯ ಉಪಾಧ್ಯಕ್ಷ ಮಹೇಶ್ ಕುಮಾರ್ ಮಲ್ಪೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಜೇಯ ಪೂಜಾರಿ ಮೇಲ್ಮನೆ ವಂದಿಸಿದರು. ಇಡೀ ಕಾರ್ಯಕ್ರಮವನ್ನು ತೇಜಸ್ ಬಂಗೇರ ಅವರು ಯಶಸ್ವಿಯಾಗಿ ನಿರೂಪಿಸಿದರು



Related posts

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk

ಚಿತ್ರರಂಗದ ಮಿನುಗು ತಾರೆ ರೀಟಾ ಆರ್. ಅಂಚನ್ ವಿಧಿವಶ

Mumbai News Desk

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ

Mumbai News Desk

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

ಐಫೋನ್ ವ್ಯಾಮೋಹಕ್ಕೆ ಬಲಿಯಾಯ್ತು ಸುಂದರ ಪರಿವಾರ : ಇಂದಿನ ಯುವಜನತೆಗೆ ಕಣ್ಣೀರಿನ ಎಚ್ಚರಿಕೆ

Mumbai News Desk

ಆಶಾ ಭೋಸ್ಲೆ ಅವರ ಆರೋಗ್ಯದಲ್ಲಿ ಏರುಪೇರು: ಮುಂಬೈನ ಆಸ್ಪತ್ರೆಗೆ ದಾಖಲು

Mumbai News Desk