30.9 C
Mumbai
June 8, 2026
Mumbai News Kannada
ಸುದ್ದಿ

ಮುಂಬೈ : ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ನೋಯ್ಡಾದಲ್ಲಿ ಬಂಧನ








ಅನಾಮಧೇಯ ವ್ಯಕ್ತಿಯೊಬ್ಬ 400 ಕೆಜಿ ಆರ್ಡಿಎಕ್ಸ್ ಬಳಸಿ ಮಾನವ ಬಾಂಬ್ ಗಳಿಂದ ಮುಂಬೈಯನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ ಒಂದು ದಿನದ ನಂತರ ಮುಂಬೈ ಪೊಲೀಸ್ ಅಪರಾಧ ವಿಭಾಗವು ಉತ್ತರ ಪ್ರದೇಶದ ನೋಯ್ಡಾದಲ್ಲಿ 50 ವರ್ಷದ
ಆರೋಪಿಯನ್ನು ನೋಯ್ಡಾದಲ್ಲಿ ಬಂಧಿಸಿದೆ. ಬಂಧಿತನನ್ನು 50 ವರ್ಷದ ಅಶ್ವಿನ್ ಕುಮಾರ್ ಸುಪ್ರಾ ಎಂದು ಗುರುತಿಸಲಾಗಿದ್ದು, ಇತ ಬಿಹಾರ ಮೂಲದವನು ಎಂದು ತಿಳಿದುಬಂದಿದೆ.
​ಪೊಲೀಸರ ಪ್ರಕಾರ, ಆರೋಪಿಯು ಮುಂಬೈ ಸಂಚಾರ ವಿಭಾಗಕ್ಕೆ ಬೆದರಿಕೆ ಸಂದೇಶ ಕಳುಹಿಸಿದ್ದನು. ಈ ಕುರಿತು ತೀವ್ರ ತನಿಖೆ ನಡೆಸಿದ ಅಪರಾಧ ವಿಭಾಗವು, ಸಂದೇಶ ಕಳುಹಿಸಲು ಬಳಸಿದ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಅನ್ನು ಪತ್ತೆಹಚ್ಚಿ, ನೋಯ್ಡಾದಲ್ಲಿ ಅಶ್ವಿನ್ ಕುಮಾರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
​ಮುಂಬೈ ಅಪರಾಧ ವಿಭಾಗದ ಅಧಿಕಾರಿಗಳು ಆರೋಪಿಯನ್ನು ನೋಯ್ಡಾದಿಂದ ಮುಂಬೈಗೆ ಕರೆತರುತ್ತಿದ್ದು, ಹೆಚ್ಚಿನ ವಿಚಾರಣೆ ಮತ್ತು ತನಿಖೆ ನಡೆಸಲಿದ್ದಾರೆ. ಈ ಘಟನೆ ಮುಂಬೈನಲ್ಲಿ ಭದ್ರತಾ ವ್ಯವಸ್ಥೆಗಳ ಕುರಿತು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.
ನಾವು ಪ್ರತಿಯೊಂದು ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ . ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಹೆಚ್ಚಿನ ಜಾಗರೂಕತೆ ಇರುತ್ತದೆ. ಆರೋಪಿಗಳು ವಿವಿಧ ಸಂಖ್ಯೆಗಳಿಂದ ಸಂದೇಶಗಳನ್ನು ಕಳುಹಿಸಿದ್ದರು, ನಾವು ಅವರನ್ನು ಉತ್ತರಪ್ರದೇಶದ ನೋಯ್ಡಾದಲ್ಲಿ ಪತ್ತೆ ಹಚ್ಚಿದ್ದೇವೆ, ನಮ್ಮ ತಂಡಗಳು ಗೌತಮ್ ಬುದ್ಧ ನಗರ ಪೊಲೀಸರ ಸಹಾಯದಿಂದ ಅವನನ್ನು ಬಂಧಿಸಿದ್ದು, ಅಪರಾಧಕ್ಕೆ ಬಳಸಲದ ಫೋನ್ ಗಳನ್ನು ನಾವು ಈಗಾಗಲೇ ಹೊಸ ಪಡಿಸಿಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.



Related posts

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.

Mumbai News Desk

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk