July 23, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್‌ನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಉತ್ಸವ







ಚಿತ್ರ ವರದಿ: ಉಮೇಶ್ ಕೆ. ಅಂಚನ್

​ಮುಂಬೈನ ಬಿಲ್ಲವರ ಅಸೋಸಿಯೇಷನ್‌ನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಉತ್ಸವವನ್ನು ಸೆಪ್ಟೆಂಬರ್ 14ರಂದು ಭಾಂಡುಪ್ ಪಶ್ಚಿಮದ ಸತ್ಯ ವಿಜಯ ವಸತಿ ಸಂಕೀರ್ಣದಲ್ಲಿರುವ ಸ್ಥಳೀಯ ಕಚೇರಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

​ಅಂದು ಬೆಳಿಗ್ಗೆ ಯೋಗೇಶ್ ಭಟ್ ಅವರ ಪೌರೋಹಿತ್ಯದಲ್ಲಿ ಗಣಹೋಮ, ಗುರುಮೂರ್ತಿ ಅಭಿಷೇಕ, ಹಾಗೂ ಗುರು ಪೂಜೆಗಳು ನಡೆದವು. ಭುವಾಜಿಗಳಾದ ಜಯ ಸಿ. ಪೂಜಾರಿ ಮತ್ತು ಸೀತಾರಾಮ ಪೂಜಾರಿ ಅವರು ಪೂಜಾ ಕಾರ್ಯಗಳಿಗೆ ಸಹಕರಿಸಿದರು. ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಜನಾರ್ದನ ಆರ್. ಪೂಜಾರಿ ದಂಪತಿಗಳು ಪೂಜಾ ವ್ರತ ಕೈಗೊಂಡಿದ್ದರು. ನಂತರ, ಸಮಿತಿಯ ಸದಸ್ಯರು ಮತ್ತು ನಾರಾಯಣ ಗುರು ಭಜನಾ ಮಂಡಳಿಯಿಂದ ಭಜನೆ, ಕುಣಿತ ಭಜನೆ, ಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮಗಳು ನಡೆದವು.

​ಈ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಷನ್ ಮುಂಬೈ ಅಧ್ಯಕ್ಷರಾದ ಹರೀಶ್ ಜಿ. ಅಮೀನ್, ಉಪಾಧ್ಯಕ್ಷರುಗಳಾದ ಪುರುಷೋತ್ತಮ ಎಸ್. ಕೋಟ್ಯಾನ್, ಮೋಹನ್ ಸಿ. ಕೋಟ್ಯಾನ್, ಕೆ. ಸುರೇಶ್ ಕುಮಾರ್, ಗೌರವ ಕೋಶಾಧಿಕಾರಿ ರವಿ ಸನಿಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೋಟ್ಯಾನ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ಶಂಕರ್ ಪೂಜಾರಿ, ಸದಾನಂದ್ ಅಮೀನ್, ಯುವಾಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ನೀಲೇಶ್ ಪಲಿಮಾರು, ಕಾರ್ಯದರ್ಶಿ ಯೋಗೇಶ್ ಪೂಜಾರಿ, ಅಸೋಸಿಯೇಷನ್‌ನ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಪರಿಸರದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಉದ್ಯಮಿಗಳು ಮತ್ತು ಅಪಾರ ಸಂಖ್ಯೆಯ ಗುರು ಭಕ್ತರು ಉಪಸ್ಥಿತರಿದ್ದು, ಗುರುಪ್ರಸಾದ ಸ್ವೀಕರಿಸಿದರು.

​ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಜನಾರ್ದನ ಪೂಜಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಗೌರವ ಕಾರ್ಯದರ್ಶಿ ಸದಾನಂದ್ ಪೂಜಾರಿ ವಂದನಾರ್ಪಣೆ ಮಾಡಿದರು.

​ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಎಂ.ಬಿ. ಸನಿಲ್, ಉಪ ಕಾರ್ಯಾಧ್ಯಕ್ಷರುಗಳಾದ ಶೇಖರ್ ಎಂ. ಪೂಜಾರಿ, ಶಂಭು ಕೆ. ಸನಿಲ್, ಕೋಶಾಧಿಕಾರಿ ಜಯಂತ್ ಪೂಜಾರಿ, ಜೊತೆ ಕೋಶಾಧಿಕಾರಿ ಅರವಿಂದ್ ಸಿ. ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರು, ವಿಶೇಷ ಆಹ್ವಾನಿತರು, ಮಹಿಳಾ ಮತ್ತು ಯುವ ವಿಭಾಗದ ಸದಸ್ಯರು ಸೇರಿದಂತೆ ಎಲ್ಲರೂ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.



Related posts

9 ಹ್ಯಾಂಡ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Mumbai News Desk

ದಹಿಸರ್ ಶ್ರೀ ಕಾಶೀಮಠದಲ್ಲಿ ಕೊಂಕಣಿಯಲ್ಲಿ ಯಕ್ಷಗಾನ

Mumbai News Desk

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಹೃದಯನ್ ಪುಷ್ಪರಾಜ್ ಬೆಲಾಡಿ ಗೆ ಶೇ.94.40 ಅಂಕ.

Mumbai News Desk

ಚಿಣ್ಣರಬಿಂಬ ವಿಕ್ರೋಲಿ ಶಿಬಿರದ ಮಕ್ಕಳ ಸಾಂಸ್ಕೃತಿಕ ಪ್ರತಿಭಾ ಸ್ಪರ್ಧೆ

Mumbai News Desk

ಭಾಂಡುಪ್ ಪಿಂಪಾಲೇಶ್ವರ ಮಹಾದೇವ ಮಂದಿರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ.

Mumbai News Desk