July 23, 2026
Mumbai News Kannada
ಸುದ್ದಿ

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ







ದುಬೈ: ಯುಎಇ ಬಂಟ್ಸ್‌ನ ವತಿಯಿಂದ ಆಯೋಜಿಸಲಾದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ನಗರದ ಜೆ.ಎಸ್.ಎಸ್. ಶಾಲೆಯಲ್ಲಿ ಭಕ್ತಿ ಭಾವದೊಂದಿಗೆ ಅಕ್ಟೋಬರ್ ಐದರಂದು ನೆರವೇರಿತು.

​ಪೂಜಾ ಕಾರ್ಯಕ್ರಮದಲ್ಲಿ ಯುಎಇ ರಾಜ್ಯದಲ್ಲಿರುವ ಎಲ್ಲ ಬಂಟ ಬಾಂಧವರು ಹಾಗೂ ಯುಎಇಯ ಎಲ್ಲಾ ಸಮುದಾಯದ ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡು ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾದರು.

ರಘು ಭಟ್ ಮತ್ತು ಸಂತೋಷ್ ಭಟ್ ಅವರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯ ವೈದಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಪೂಜೆಯ ಪ್ರತಿನಿಧಿಗಳಾಗಿ ಯುಎಇ ಬಂಟ್ಸ್‌ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ ಮತ್ತು ರೂಪಲಿ ಕುಮಾರ್ ಶೆಟ್ಟಿ, ಸಾಯಿನಾಥ್ ವಿಠಲ ಶೆಟ್ಟಿ ಮತ್ತು ಪ್ರತಿಮಾ ಸಾಯಿನಾಥ್ ಶೆಟ್ಟಿ, ಹಾಗೂ ಪೆರ್ಲಗುತ್ತು ಗೋಕುಲದಾಸ್ ರೈ ಮತ್ತು ನಿಶ್ಮೀತಾ ಗೋಕುಲದಾಸ್ ರೈ ದಂಪತಿಗಳು ಸಂಕಲ್ಪ ಮಾಡಿ ಕುಳಿತಿದ್ದರು.

​ಬಂಟ್ಸ್‌ನ ಮಹಾ ಪೋಷಕರಾದ ಸರ್ವೋತ್ತಮ ಶೆಟ್ಟಿ ಮತ್ತು ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಪೂಜೆಯಲ್ಲಿ ಪಾಲ್ಗೊಂಡ ಎಲ್ಲರನ್ನು ಸ್ವಾಗತಿಸಿದರು.

​ಈ ಸಂದರ್ಭದಲ್ಲಿ ಶ್ರೀ ರಾಜರಾಜೇಶ್ವರಿ ಭಜನಾ ಸಂಘದ ವತಿಯಿಂದ ಭಜನಾ ಕಾರ್ಯಕ್ರಮ, ಮಕ್ಕಳಿಂದ ವಿಷ್ಣು ಸಹಸ್ರನಾಮ ಹಾಗೂ ಯುಎಇ ಬಂಟ್ಸ್ ಮತ್ತು ವರಮಹಾಲಕ್ಷ್ಮಿ ಸಮಿತಿಯ ಸದಸ್ಯ-ಸದಸ್ಯೆಯರಿಂದ ನೃತ್ಯ ಭಜನೆ ಸೇವೆ ಜರುಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ಮತ್ತು ಅನ್ನಸಂತರ್ಪಣೆ ನಡೆಯಿತು.

​ಪೂಜೆಯ ನೇತೃತ್ವವನ್ನು ವಹಿಸಿದ ರವಿರಾಜ್ ಶೆಟ್ಟಿ ಮತ್ತು ಶಶಿ ರವಿರಾಜ್ ಶೆಟ್ಟಿ ಹಾಗೂ ವಾಸು ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಯಶಸ್ಸಿನ ಹಿಂದೆ ದುಡಿದ 2025ನೇ ಸಾಲಿನ ಸಂಘಟನಾ ಸಮಿತಿಯ ಸದಸ್ಯರಾದ ದಿನ್ ರಾಜ್ ಶೆಟ್ಟಿ ಮತ್ತು ದೀಪ್ತಿ ದಿನ್ ರಾಜ್ ಶೆಟ್ಟಿ, ಅನುಪ್ ಶೆಟ್ಟಿ ಮತ್ತು ಚೈತ್ರ ಅನುಪ್ ಶೆಟ್ಟಿ, ಸುಪ್ರಜ್ ಶೆಟ್ಟಿ ಮತ್ತು ಪೃಥ್ವಿ ಸುಪ್ರಜ್ ಶೆಟ್ಟಿ, ವಸಂತ ಶೆಟ್ಟಿ ಮತ್ತು ರಜಿತಾ ವಸಂತ ಶೆಟ್ಟಿ, ಸೀತಾರಾಮ ಶೆಟ್ಟಿ ಮತ್ತು ಅಶ್ವಿನಿ ಸೀತಾರಾಮ ಶೆಟ್ಟಿ, ಗೋಕುಲದಾಸ್ ರೈ ಮತ್ತು ನಿಶ್ಮಿತಾ ಗೋಕುಲದಾಸ್ ರೈ, ಕೀರ್ತಿ ನಿತ್ಯ ಪ್ರಕಾಶ್ ಶೆಟ್ಟಿ, ಮೇಘ ಪ್ರಸನ್ನ ಶೆಟ್ಟಿ, ವಿದ್ಯಾಶ್ರಿ ಸತೀಶ್ ಹೆಗ್ಡೆ, ದೀಪಾ ಕಿರಣ್ ಶೆಟ್ಟಿ, ಲಾಸ್ಯ ಸಂಪತ್ ಶೆಟ್ಟಿ ಹಾಗೂ ಬಾಲಕೃಷ್ಣ ಶೆಟ್ಟಿ, ಸಂತೋಷ್ ಶೆಟ್ಟಿ ಪೊಳಲಿ, ಬಾಲಕೃಷ್ಣ ಶೆಟ್ಟಿ ಮಾಡುರುಗುತ್ತು ಮತ್ತು ಪ್ರತ್ಯಕ್ಷವಾಗಿ-ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಧನ್ಯವಾದ ತಿಳಿಸಿದರು.

ಚಿತ್ರ ವರದಿ: ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)



Related posts

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಐಬಿಎ (IBA) ಪ್ರಶಸ್ತಿಗಳ ಗರಿ: ಡಿಜಿಟಲ್ ಸೇಲ್ಸ್ ಮತ್ತು ಐಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಅತ್ಯುತ್ತಮ ಸಾಧನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಕುಲಾಲ ಭವನ ಉದ್ಘಾಟನೆ: ದಾನಿಗಳು ಮತ್ತು ಗಣ್ಯರಿಗೆ ಕುಲಾಲ ಸಂಘ ಮುಂಬೈ ವತಿಯಿಂದ ಗೌರವ ಸನ್ಮಾನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk