32 C
Mumbai
April 24, 2026
Mumbai News Kannada
ಸುದ್ದಿ

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ





​ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ನಡೆದಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲಿ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

​ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರಗಳು ಎದ್ದಿದ್ದು, ಪರ-ವಿರೋಧ ಚರ್ಚೆಗಳು ನಡೆದಿವೆ.

​ದೈವ ನಂಬಿದವರ ಸ್ವತ್ತು. ದೈವ ಒಂದು ಜಾತಿಗೆ ಸೀಮಿತವಾದ ಸ್ವತ್ತಲ್ಲ. ದೈವ ಜಾತಿ-ಮತಕ್ಕೆ ಮೀರಿದ ಸ್ವತ್ತು. ಕಾಂತಾರದಿಂದ ದೈವಭಕ್ತಿ ಹೆಚ್ಚಿದೆ. ಈ ಸಿನಿಮಾವನ್ನು ನಿರ್ದೇಶಿಸಿ ಪಾತ್ರ ನಿರ್ವಹಿಸಿರುವ ರಿಷಬ್ ಶೆಟ್ಟಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈ ನೆಲದ ಭಾಷೆಯ ಕಂಪನ್ನು ರಾಷ್ಟ್ರದೆಲ್ಲೆಡೆ ಪಸರಿಸಿದ್ದಾರೆ. ಸಿನಿಮಾದಿಂದ ದೈವಗಳ ಅವಹೇಳನ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.



Related posts

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಸ್ನೇಹ ಶಿವಪ್ಪ ಮೊಗವೀರ ಉತ್ತೀರ್ಣ

Mumbai News Desk

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk

ಯೋಗ  ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ

Mumbai News Desk

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ

Mumbai News Desk

ನಾಸಿಕ್ ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ:

Mumbai News Desk