July 23, 2026
Mumbai News Kannada
ತುಳುನಾಡು

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ







ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರ ಸಮಕ್ಷಮದಲ್ಲಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಪರವಾಗಿ ಗೌರವಿಸಲಾಯಿತು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ದೇವಳದ ಪ್ರಥಮ ಮತ್ತು ದ್ವಿತೀಯ ಹಂತದ ಕಾಮಗಾರಿಯನ್ನು ವೀಕ್ಷಿಸಿ ನಂತರ, ನವದುರ್ಗಾ ಲೇಖನ ಮಂಟಪಕ್ಕೆ ಆಗಮಿಸಿ, ಲೇಖನ ಬರೆಯುವ ಸಂಕಲ್ಪ ಮಾಡಿ, ಒಂದು ದಿನದ ಲೇಖನವನ್ನು “ಲೇಖನ ಯಜ್ಞದ ಪುಣ್ಯಭೂಮಿ” ಯಲ್ಲಿ ಬರೆದರು.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಮಾರಿಯಮ್ಮ ದೇವಿಯ ದರುಶನ ಮಾಡೋಕೆ ಸಿಕ್ಕಿರೋದು ನನ್ನ ಸೌಭಾಗ್ಯ, ದೇವಿಯ ಒಂಬತ್ತು ಹೆಸರುಗಳನ್ನು ಬರೆಯುವ ಸೇವೆಯಲ್ಲಿ ನನ್ನಂತೆ ನೀವೆಲ್ಲರೂ ಭಾಗಿಯಾಗಿ, ನಾವೇಲ್ಲೆ ಇದ್ದರೂ ನಮ್ಮನ್ನು ಸೆಳೆಯುವ ಶಕ್ತಿ ಈ ದೇವಿಗಿದೆ, ದೇವಿಯ ಪ್ರೇರಣೆಯಂತೇ ನಾನಿಲ್ಲಿಗೆ ಬಂದು ಸೇವೆ ಸಲ್ಲಿಸಿ, ಪ್ರಾರ್ಥಿಸಿಕೊಂಡಿದ್ದೇನೆ, ಎಲ್ಲರಿಗೂ ಅವಳ ಅನುಗ್ರಹ ಇರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಮತ್ತು ಆರ್ಥಿಕ ಸಮಿತಿ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ.ಶೆಟ್ಟಿ ಹಾಗೂ ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.

.

.

.

.



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

“ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಹೆಜಮಾಡಿಯಲ್ಲಿ ಮಹತ್ವದ ಸಭೆ – ಡಿಜಿಟಲ್ ಮೀಡಿಯಾ ಆರಂಭ ಮತ್ತು ನೂತನ ಸದಸ್ಯರ ಸೇರ್ಪಡೆ”

Mumbai News Desk