September 6, 2026
Mumbai News Kannada
ತುಳುನಾಡು

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ವಿಜೃಂಭಣೆಯ ಮುಷ್ಟಿ ಕಾಣಿಕೆ ಸಮರ್ಪಣೆ





ವರದಿ : ಈಶ್ವರ ಎಂ. ಐಲ್

ಮುಂಬಯಿ : ಮುಲ್ಕಿ ಹಳೆಯಂಗಡಿ ಸಸಿಹಿತ್ತು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಹೋತ್ಸವ ಮಾರ್ಚ್ 4 ರಿಂದ 8 ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಮುಷ್ಟಿ ಕಾಣಿಕೆ ಸಮರ್ಪಣೆ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಆವರಣದಲ್ಲಿ ನ. 9 ರಂದು ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶ್ರೀಪತಿ ಭಟ್ ಹೊಯ್ಕೆಗುಡ್ಡೆ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಕ್ಷೇತ್ರದ ಅರ್ಚಕ ಹಾಗೂ ಅನುವಂಶಿಕ ಮೊಕೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ, ಮುಷ್ಟಿ ಕಾಣಿಕೆಗೆ ಚಾಲನೆ ನೀಡಿದರು.

ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮುಂಬಯಿಯ ನ್ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ, ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ, ಆಡಳಿತ ಸಮಿತಿಯ ಅಧ್ಯಕ್ಷ ವಾಮನ್ ಇಡ್ಯಾ, ಮುಂಬಯಿಯ ಉದ್ಯಮಿ ಧರ್ಮಪಾಲ ದೇವಾಡಿಗ, ಬ್ರಹ್ಮಕಲಶೋತ್ಸವ ಮುಂಬಯಿ ಸಮಿತಿಯ ಅಧ್ಯಕ್ಷ ವೇದಪ್ರಕಾಶ್ ಎಂ ಶ್ರೀಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಪೂಜಾರಿ,ಹಳೆಯಂಗಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ, ಉದ್ಯಮಿ ಸುನೀಲ್ ಪಾಯಸ್ ಮಂಗಳೂರು ಮತ್ತಿತರರು ಉಪಸ್ಥಿತರಿದ್ದರು. ರಾಜೇಂದ್ರ ಕುಮಾರ್ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.



Related posts

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್: “ಜೈ” ತುಳು ಚಿತ್ರದ ನಟನೆಗೆ ಅಕ್ಷರ್ ಜಗನ್ನಾಥ್ ಶೆಟ್ಟಿ ಬಾಳಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ

Mumbai News Desk

ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ಸುನೀಲ್ ಆಳ್ವ ಆಯ್ಕೆ

Mumbai News Desk

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk

ಮೂಲ್ಕಿ: ‘ಹೊಸ ಅಂಗಣ’ದ ‘ತಿಂಗಳ ಬೆಳಕು’ ಕಾರ್ಯಕ್ರಮ, ಪೋಸ್ಟ್‌ಮ್ಯಾನ್ ಪ್ರಕಾಶ್ ಕೆ. ಸಾಲ್ಯಾನ್‌ರಿಗೆ ಸನ್ಮಾನ

Mumbai News Desk

ಅಸಹಾಯಕ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಕುತ್ಯಾರು ಕುಲಾಲ ಸಂಘ..

Mumbai News Desk