September 6, 2026
Mumbai News Kannada
ಸುದ್ದಿ

ಬಂಟ್ವಾಳ : ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುತ್ತಿದ್ದ ಕಾರು ಅಪಘಾತ; ಪೊಲೀಸ್ ಅಧಿಕಾರಿ ಪತ್ನಿ ಸೇರಿ ಮೂವರ ದುರ್ಮರಣ





ದಕ್ಷಿಣ ಕನ್ನಡದ ಬಂಟ್ವಾಳದ ಬಿಸಿರೋಡ್ ವೃತ್ತದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಸರ್ಕಲ್​ಗೆ ಇನ್ನೋವಾ ಕಾರು ಗುದ್ದಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಿಂದ ಉಡುಪಿ ಮಠಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವೈಜ್ಞಾನಿಕ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರೆಲ್ಲಾ ಬೆಂಗಳೂರಿನ ಪೀಣ್ಯ ನಿವಾಸಿಗಳು ಎನ್ನಲಾಗ್ತಿದೆ. ಉಡುಪಿಗೆ ತೆರಳಿದ್ದ ಒಂಬತ್ತು ಮಂದಿಯಲ್ಲಿ ಮೃತ ರಮ್ಯಾ ಅವರು ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಎಂಬ ಮಾಹಿತಿ ತಿಳಿದು ಬಂದಿದೆ. ಅಪಘಾತದಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ
ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ(23), ರವಿ‌(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ‌ ಸರ್ಕಲ್ ಅವೈಜ್ಞಾನಿಕವಾಗಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Related posts

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ‘ಆರ್ಟಿಕಲ್ 370’ ಅತ್ಯುತ್ತಮ ಚಿತ್ರ, ಮಮ್ಮುಟ್ಟಿ-ಕಾರ್ತಿಕ್ ಆರ್ಯನ್‌ಗೆ ಅತ್ಯುತ್ತಮ ನಟ ಪ್ರಶಸ್ತಿ

Mumbai News Desk

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk