July 23, 2026
Mumbai News Kannada
ತುಳುನಾಡು

ಬನ್ನಂಜೆ ಬಿಲ್ಲವರ ಸೇವಾ ಸಂಘ: ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ.







ಉಡುಪಿ: ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು.

ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆದು, ಇಲ್ಲವೆ ಯಶಸ್ವಿ ಉದ್ಯಮಿಗಳಾಗಿ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು. ಆ ಮೂಲಕ ಇನ್ನು ಹೆಚ್ಚಿನ ವಿದ್ಯಾರ್ಥಿ ವೇತನವನ್ನು ನೀಡುವಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ಪೂಜಾರಿ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ವಿಠಲ ಪೂಜಾರಿ, ರಾಜ್ಯ ಪ್ರಶಸ್ತಿ ಪಡೆದ ದೇಯಿ ಬೈದಿತಿ ಚಿತ್ರದ ನಿರ್ಮಾಪಕ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ವಿದ್ಯಾರ್ಥಿಗಳಾದ ಹರ್ಷ ಯು.ಪೂಜಾರಿ,ಪ್ರಣತಿ ಜತ್ತನ್, ಸಾಯಿ ವೈಷ್ಣವ್ ದಯಕರ್ ಅವರುಗಳನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. 431 ಮಂದಿ ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವೇತನ ವಿತರಿಸಲಾಯಿತು.


ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಶಿಧರ ಎಂ. ಅಮೀನ್ ವಹಿಸಿದ್ದರು.

ಸ್ವಾಗತ : ದಯಾನಂದ ಪೂಜಾರಿ ಬನ್ನಂಜೆ,
ಧನ್ಯವಾದ : ರಾಘವೇಂದ್ರ
ನಿರೂಪಣೆ : ವಿ.ಜೆ ತೇಜೇಶ್ ಜೆ ಬಂಗೇರ

ಮುಖ್ಯ ಅತಿಥಿಗಳಾಗಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮಣಿಪಾಲದ ಸಂಶೋದನಾ ವಿದ್ಯಾರ್ಥಿ ಶ್ರೇಯಸ್ ಜಿ. ಕೋಟ್ಯಾನ್, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ, ಕೋಶಾಧಿಕಾರಿ ಸದಾನಂದ ಅಮೀನ್, ಸದಸ್ಯರಾದ ಅಶೋಕ್ ಪೂಜಾರಿ, ಸುಧಾಕರ ಪೂಜಾರಿ, ಉದಯ ಪೂಜಾರಿ, ಪ್ರವೀಣ್ ಆರ್ ಸುವರ್ಣ,ವಿಶ್ವನಾಥ್ ಕಲ್ಮಾಡಿ, ಗಣೇಶ್ ಕೋಟ್ಯಾನ್, ಸತೀಶ್ ಅಮೀನ್, ಲಕ್ಷ್ಮಣ ಪೂಜಾರಿ, ಸಂದೀಪ್ ಸನಿಲ್, ಸುಕನ್ಯಾ,ವಿದ್ಯಾ ನಿಧಿ ಟ್ರಸ್ಟ್‌ನ ಸದಸ್ಯರಾದ ಪ್ರಭಾಕರ ಪೂಜಾರಿ, ದೀಪಕ್ ಕುಮಾರ್, ಕೃಷ್ಣ ಆಂಚನ್, ಜಿತೇಶ್, ಎಸ್. ಟಿ. ಕುಂದರ್, ಜಯಕರ್ ಉಪಸ್ಥಿತರಿದ್ದರು..



Related posts

ವಿಶ್ವ ಗಾಣಿಗರ ಚಾವಡಿ ಮಂಗಳೂರು – ಉಚಿತ ವೈದ್ಯಕೀಯ ಶಿಬಿರ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ

Mumbai News Desk

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಸಂಸ್ಕೃತಿ, ಬಾಂಧವ್ಯ ಮತ್ತು ಸಾಮರಸ್ಯದ ಸಂಗಮ: ಹೆಜಮಾಡಿಯಲ್ಲಿ ಕಳೆಗಟ್ಟಿದ ‘ಆಟಿಡೊಂಜಿ ದಿನ’ ಉತ್ಸವ

Mumbai News Desk

ಮೂಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯಿಂದ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಸಾಮಗ್ರಿ ಮತ್ತು ಕುರ್ಚಿಗಳ ಕೊಡುಗೆ

Mumbai News Desk

ಕೊಂಡೆವೂರು ಮಠದಲ್ಲಿ ಪ್ರತಿಷ್ಠಾವರ್ಧಂತಿ, ನವಚಂಡಿಕಾ ಯಾಗ . ಧಾರ್ಮಿಕ ಸಭೆ.

Mumbai News Desk