July 23, 2026
Mumbai News Kannada
ಸುದ್ದಿ

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು







ಪಣಜಿ: ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಶನಿವಾರ (ಡಿ. 6) ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ. ಬಾಗಾದಲ್ಲಿರುವ ‘ಬಿರ್ಚ್ ಬೈ ರೋಮಿಯೋ ಲೇನ್’ ಎಂಬ ಕ್ಲಬ್‌ನಲ್ಲಿ ಕಿಚನ್‌ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅವಘಡ ಸಂಭವಿಸಿದೆ ಎಂದು ಗೋವಾ ಪೊಲೀಸ್ ಮುಖ್ಯಸ್ಥ ಅಲೋಕ್ ಕುಮಾರ್ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಮೃತರೆಲ್ಲರೂ ಕ್ಲಬ್ ಸಿಬ್ಬಂದಿ ಎಂದು ತಿಳಿದು ಬಂದಿದ್ದು ಎಲ್ಲಾ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಕೆಲವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತರಾದ್ರೆ, ಒಂದಿಷ್ಟು ದಟ್ಟವಾದ ಹೊಗೆಯಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಉಸಿರುಗಟ್ಟಿ ಮೃತರಾಗಿದ್ದಾರೆ. ಕ್ಲಬ್‌ನ ಕೆಳಮಹಡಿಯಲ್ಲಿ ಈ ಸ್ಪೋಟ ಸಂಭವಿಸಿದೆ ಎಂದು ವರದಿಯಾಗಿದೆ. ಗ್ಯಾಸ್ ಸ್ಫೋಟ ಸಂಭವಿಸಿದ ವೇಳೆ ಕ್ಲಬ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರು. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್‌ಕ್ಲಬ್​​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರೋದೇ ಹೆಚ್ಚಿನ ಅವಘಡಕ್ಕೆ ಕಾರಣವಾಗಿದೆ. ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಅರ್‌ಪೋರಾ ಗ್ರಾಮದಲ್ಲಿ ಈ ಜನಪ್ರಿಯ ನೈಟ್​​ಕ್ಲಬ್​​​ ಕಳೆದ ವರ್ಷ ಆರಂಭವಾಗಿತ್ತು. ಎಲ್ಲ 23 ಶವಗಳನ್ನು ಘಟನಾ ಸ್ಥಳದಿಂದ ಹೊರತೆಗೆಯಲಾಗಿದ್ದು, ಬಾಂಬೊಲಿಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ್ದು, ಇಡೀ ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿಯಲ್ಲಿ 14ನೇ ರ‍್ಯಾಂಕ್‌ ಗಳಿಸಿದ ರಶ್ಮಿತಾ ರಾಜು ಕುಲಾಲ್ ಅವರ ಉನ್ನತ ವ್ಯಾಸಂಗಕ್ಕೆ ಕುಲಾಲ ಪ್ರತಿಷ್ಠಾನದಿಂದ 25 ಸಾವಿರದ ನೆರವು.

Mumbai News Desk

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk