September 6, 2026
Mumbai News Kannada
ಕರ್ನಾಟಕ

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ





 ಕಳೆದ ತಿಂಗಳು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಜಾರಿಯಾಗಿದ್ದ ಮುಟ್ಟಿನ ಕಡ್ಡಾಯ ರಜೆ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನ. 12ರಂದು ಕಾರ್ಮಿಕ ಇಲಾಖೆಯಿಂದ ಜಾರಿಯಾಗಿದ್ದ ಈ ಆದೇಶದ ವಿರುದ್ಧ ಕರ್ನಾಟಕ ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಮೊರೆ ಹೋಗಿದ್ದು. ಡಿ. 9ರಂದು ನಡೆದ ವಿಚಾರಣೆಯಲ್ಲಿ ವಾದ-ವಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ. ಮಾಲೀಕರ ಸಂಘದ ಪರವಾಗಿ ವಕೀಲ ಪ್ರಶಾಂತ್ ಬಿ.ಕೆ. ಅವರು ವಾದ ಮಂಡಿಸಿದ್ದರು

ಈ ಆದೇಶದಲ್ಲಿ, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಹಾಗೂ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿದಂತೆ ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗುತ್ತದೆ. ಸರ್ಕಾರಿ ಇಲಾಖೆ, ಸಂಸ್ಥೆಗಳು ಸೇರಿ ಅರೆ ಸರ್ಕಾರಿ, ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲೂ ಮಹಿಳೆಯರಿಗೆ ಅವರ ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಕಡ್ಡಾಯವಾಗಿ ಪಾವತಿ ರಜೆ ನೀಡಬೇಕು ಎಂದು ಸೂಚಿಸಲಾಗಿತ್ತು.



Related posts

ಉಡುಪಿ: ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಶೂಟರ್‌ ಕಾಲಿಗೆ ಪೊಲೀಸ್‌ ಗುಂಡೇಟು, ಇಬ್ಬರು ಆರೋಪಿಗಳು ಪರಾರಿ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Mumbai News Desk

ತಾಯಿಯ ಅಗಲಿಕೆಯ ನೋವಿನಲ್ಲೂ ಅಪ್ರತಿಮ ಸಾಧನೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಕಾಲೇಜಿನ ದಿಶಾ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ

Mumbai News Desk