September 6, 2026
Mumbai News Kannada
ಕರ್ನಾಟಕ

ಕರಾವಳಿ,‌ ಮಲೆನಾಡು ಭಾಗಕ್ಕೆ ‌ ಶೀಘ್ರದಲ್ಲಿ ಹೊಸ ಪ್ರವಾಸೋದ್ಯಮ ನೀತಿ: ಡಿ. ಕೆ. ಶಿವಕುಮಾರ್





ಮಂಗಳೂರು, ಉಡುಪಿ,‌ ಉತ್ತರ ಕನ್ನಡ‌‌ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ‌ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ‌ ಬಗ್ಗೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮಲೆನಾಡು ಪ್ರದೇಶದ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕಾರವಾರ ಶಾಸಕ ಸತೀಶ್ ಸೈಲ್ ಅವರ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ರಾತ್ರಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಈಗಾಗಲೇ ಒಂದು ಸುತ್ತಿನ ಮಾತುಕತೆಯನ್ನು ಈ ಭಾಗದ ಶಾಸಕರ ಜೊತೆ ನಡೆಸಿದ್ದೇನೆ. ಮಲೆನಾಡು ಹಾಗೂ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪಿಪಿಪಿ ಮಾದರಿಯಲ್ಲಿ ಹೊಸ ನೀತಿ ತರಲಾಗುವುದು. ಖಾಸಗಿಯವರಿಗೆ ಹೆಚ್ಚಿನ ಬಂಡವಾಳ ಹೂಡಿಕೆಗೆ ಅವಕಾಶ ನೀಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗುವುದು‌” ಎಂದರು.

ಈ ಸಭೆಗೆ ಬಂಡವಾಳ ಹೂಡಿಕೆದಾರರಿಗೆ ಆಹ್ವಾನ ನೀಡಲಾಗುತ್ತಿದೆ. ಹೊರದೇಶದವರಿಗೂ ಆಹ್ವಾನ ನೀಡಲಾಗುವುದು.‌ ಇವರು ತಮ್ಮ ಬೇಡಿಕೆ ಜೊತೆಗೆ ಸಲಹೆ ಸೂಚನೆಗಳನ್ನು ನೀಡಬಹುದು. ಬಂಡವಾಳ ಹೂಡಿಕೆ ಮಾಡುವವರನ್ನು ಆಹ್ವಾನಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

ಮುಖ್ಯಮಂತ್ರಿಯವರು, ಪ್ರವಾಸೋದ್ಯಮ ಸಚಿವರು, ವಿಧಾನಸಭೆ ಸಭಾಧ್ಯಕ್ಷರು ಈ ಸಭೆಯಲ್ಲಿ ಇರಲಿದ್ದಾರೆ.‌ ನಾನೇ ಖುದ್ದಾಗಿ ಇದರ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಸಂಸತ್ ಸದಸ್ಯರು, ಶಾಸಕರು, ಸ್ಥಳೀಯ ಸಂಸ್ಥೆಗಳ ಸದಸ್ಯರಿಗೂ ಆಹ್ವಾನ ನೀಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಹೇಳಿದರು.
ಸಿಆರ್ ಜೆಡ್ ಅನುಮತಿ ಕೇಂದ್ರ ಸರ್ಕಾರ ನೀಡಬೇಕಾಗುತ್ತದೆ ಇದನ್ನು ಪಡೆಯದೇ ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆ ನಡೆಸಿದರೆ ಪ್ರಯೋಜನ ಏನು ಎಂದು ಕೇಳಿದಾಗ “ಇದರ ಬಗ್ಗೆ ಚರ್ಚೆ ನಡೆಸಲು ಎಂದೇ ಸಭೆಗೆ ಕೇಂದ್ರದ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಗೋವಾದಿಂದ ಬರುವಾಗ ನೋಡಿಕೊಂಡು ಬಂದೆ. ಅಲ್ಲಿಗೆ ಒಂದು ಕಾನುನು ಹಾಗೂ ಕರ್ನಾಟಕಕ್ಕೆ ಒಂದು ಕಾನುನು ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡಲಾಗುವುದು. ಸಮುದ್ರ ತೀರ ರಕ್ಷಣೆಗೆ ಏನು ಗೈಡ್ ಲೈನ್ ಇದೆ ಅದರಂತೆ ಕೆಲಸ ಮಾಡುತ್ತೇವೆ” ಎಂದರು.

ಈ ಭಾಗದ ಯುವ ಜನತೆ ಮುಂಬೈ, ಗೋವಾ, ಬೆಂಗಳೂರು, ಸೌದಿ ಕಡೆಗೆ ಕೆಲಸ ಅರಸಿ ಹೋಗುತ್ತಿದ್ದಾರೆ. ಇಲ್ಲಿನ ಮಾನವ ಸಂಪನ್ಮೂಲ ಇಲ್ಲಿಗೆ ಹೆಚ್ಚು ಬಳಕೆಯಾಗಬೇಕು. ಕಾರವಾರ ಏರ್ ಪೋರ್ಟ್ ನಿರ್ಮಾಣಕ್ಕೆ ಭೂಮಿ ನೀಡಿಕೆ, ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಇತರೆ ಸಂಗತಿಗಳಿಗೆ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ನೀಡಲಾಗಿದೆ. ನೌಕಾದಳದವರ ಜೊತೆ ಒಪ್ಪಂದ‌ ಮಾಡಿಕೊಂಡು ಇಲ್ಲಿ ಅಭಿವೃದ್ಧಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದರು.



Related posts

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ

Mumbai News Desk

ಜೈ ಕರ್ನಾಟಕ ಯುವ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Mumbai News Desk

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ

Mumbai News Desk

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk