31 C
Mumbai
June 8, 2026
Mumbai News Kannada
ಸುದ್ದಿ

ಉಡುಪಿ : ಡಿವೈನ್ ಪಾರ್ಕ್ ಸಂಸ್ಥಾಪಕ, ಆಧ್ಯಾತ್ಮಿಕ ಚಿಂತಕ ಎ ಚಂದ್ರಶೇಖರ್ ಉಡುಪ ನಿಧನ





ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೋದ್ಧಾರದ ಕನಸನ್ನು ಕಾರ್ಯರೂಪಕ್ಕೆ ತರುವ ಮಹತ್ತರ ಧ್ಯೇಯದೊಂದಿಗೆ ಕಳೆದ ಸುಮಾರು ಐದು ದಶಕಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ, ಖ್ಯಾತ ವೈದ್ಯ ಹಾಗೂ ಆಧ್ಯಾತ್ಮಿಕ ಚಿಂತಕ ಎ. ಚಂದ್ರಶೇಖರ್ ಉಡುಪ (75) ಅವರು ಹೃದಯಾಘಾತದಿಂದ ಜ.7ರ ಬೆಳಗಿನ ಜಾವ ದೈವಾಧೀನರಾಗಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿದ್ದ ಎ. ಚಂದ್ರಶೇಖರ್ ಉಡುಪ ಅವರು, ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲೇ ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಆಳವಾಗಿ ಪ್ರಭಾವಿತರಾಗಿದ್ದರು. ಇದೇ ಪ್ರೇರಣೆಯಿಂದ ಆರೋಗ್ಯ, ಅಧ್ಯಾತ್ಮ ಮತ್ತು ಮಾನವೀಯ ಮೌಲ್ಯಗಳ ಸಮನ್ವಯದ ಮೂಲಕ ಸಮಾಜ ಹಾಗೂ ರಾಷ್ಟ್ರಕ್ಕೆ ಒಳಿತು ಮಾಡುವ ಸಂಕಲ್ಪದೊಂದಿಗೆ “ಡಿವೈನ್ ಪಾರ್ಕ್” ಸಂಸ್ಥೆಯನ್ನು ಸ್ಥಾಪಿಸಿದರು.

ಡಿವೈನ್ ಪಾರ್ಕ್ ಮೂಲಕ ಯೋಗ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಹಾಗೂ ಆಧ್ಯಾತ್ಮಿಕ ಚಿಕಿತ್ಸಾ ಕ್ರಮಗಳನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆರೋಗ್ಯ ಕೇವಲ ದೇಹಕ್ಕೆ ಸೀಮಿತವಲ್ಲ, ಅದು ಮನಸ್ಸು ಮತ್ತು ಆತ್ಮದ ಸಮತೋಲನದಲ್ಲಿದೆ ಎಂಬ ನಂಬಿಕೆಯನ್ನು ಕಾರ್ಯರೂಪಕ್ಕೆ ತಂದವರು ಡಾ. ಚಂದ್ರಶೇಖರ್ ಉಡುಪ.
ಇವರ ಮಾರ್ಗದರ್ಶನದಲ್ಲಿ ಡಿವೈನ್ ಪಾರ್ಕ್‌ನ ಸಹಸಂಸ್ಥೆಯಾಗಿ ಎಸ್‌ಎಚ್‌ಆರ್‌ಎಫ್ (ಯೋಗಬನ) ಸ್ಥಾಪನೆಯಾಗಿ, ಯೋಗ ಮತ್ತು ಸಮಗ್ರ ಆರೋಗ್ಯದ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ನಡೆಯಿತು. ದೇಶದ ವಿವಿಧ ಭಾಗಗಳಲ್ಲದೇ ವಿದೇಶಗಳಲ್ಲಿಯೂ ಇವರ ಸಾವಿರಾರು ಭಕ್ತರು ಮತ್ತು ಅನುಯಾಯಿಗಳಿದ್ದು, ಎಲ್ಲರೂ ಅವರನ್ನು ಪ್ರೀತಿಯಿಂದ “ಡಾಕ್ಟರ್‌ಜೀ” ಎಂದು ಕರೆಯುತ್ತಿದ್ದರು.

ಅವರು ತಮ್ಮ ಜೀವನವನ್ನು ಸಂಪೂರ್ಣವಾಗಿ ಸಮಾಜಸೇವೆಗೆ ಅರ್ಪಿಸಿಕೊಂಡಿದ್ದು, ವೈಯಕ್ತಿಕ ಲಾಭಕ್ಕಿಂತ ಮಾನವ ಕಲ್ಯಾಣವನ್ನೇ ಮೊದಲ ಆದ್ಯತೆಯಾಗಿ ಕಂಡವರು. ಅವರ ಮಾರ್ಗದರ್ಶನದಲ್ಲಿ ಅನೇಕರು ಆರೋಗ್ಯ, ಜೀವನಶೈಲಿ ಹಾಗೂ ಆಧ್ಯಾತ್ಮಿಕ ಬದುಕಿನಲ್ಲಿ ಹೊಸ ದಿಕ್ಕು ಕಂಡಿದ್ದಾರೆ.

ಮೃತರು ಪುತ್ರ ಡಾ. ವಿವೇಕ ಉಡುಪ, ಸೊಸೆ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇಂದು ಬೆಳಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಡಿವೈನ್ ಪಾರ್ಕ್‌ನ ಜ್ಞಾನ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ ಎಂದು ಡಿವೈನ್ ಪಾರ್ಕ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Related posts

ಡಾ.ಈಶ್ವರ ಅಲೆವೂರು ಅವರಿಗೆ  ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ

Mumbai News Desk

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk

ಬಾಲಿವುಡ್ ನಟ ಸೈಪ್ ಆಲಿ ಖಾನ್ ಗೆ ಚಾಕುವಿನಿಂದ ಹಲ್ಲೆ,: ಆಸ್ಪತ್ರೆಗೆ ದಾಖಲು

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (05/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )

Mumbai News Desk