32 C
Mumbai
April 23, 2026
Mumbai News Kannada
ಕರ್ನಾಟಕ

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ





ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿರುವ ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ ಇದರ ಶಾಲಾ ಮತ್ತು ಹಳೆವಿದ್ಯಾರ್ಥಿಗಳ ವಾರ್ಷಿಕೋತ್ಸವವು ಇತ್ತೀಚೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ಜರಗಿತು.


ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.


ತದನಂತರ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಧರ ಖಾರ್ವಿಯವರ ಅಧ್ಯಕ್ಷತೆಯಲ್ಲಿ ನೆಡೆದ ಸಭಾ ಕಾರ್ಯಕ್ರಮದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷರಾದ ಶೇಖರ ಖಾರ್ವಿ, ಹಿರಿಯರು ಮತ್ತು ನಿವೃತ್ತ ಪ್ರೊಫೆಸರ್ ವಾಸುದೇವ ಕಾರಂತ್ ಕೊಡೇರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೌರಿ ದೇವಾಡಿಗ, ಶಾಲೆಯ ಹಳೆವಿದ್ಯಾರ್ಥಿ ಡಾಕ್ಟರ್ ಸತ್ಯ ನಾರಾಯಣ ಕಾರಂತ್, ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ವಿಶ್ವನಾಥ ಪೂಜಾರಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯರುಗಳಾದ ರಮೇಶ್ ಖಾರ್ವಿ, ಕೃಷ್ಣ ಖಾರ್ವಿ, ನೇತ್ರಾವತಿ ಖಾರ್ವಿ,ಶಶಿಕಲಾ ವಿ. ಕೆ., ಗ್ರಾಮ ಪಂಚಾಯತ್ ಸದಸ್ಯರು ಮತ್ತು ಹಳೆವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಆನಂದ ಪೂಜಾರಿ ಕೊಡೇರಿ, ವಿದ್ಯಾರ್ಥಿ ನಾಯಕ ಸನ್ವಿತ್ ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಶಾಲಾ ಮುಖ್ಯ ಶಿಕ್ಷಕರಾದ ಮರ್ಲಿ ಮೊಗವೀರ ಸ್ವಾಗತಿಸಿದರೆ ಶಿಕ್ಷಕಿ ಶಾಂತ ವಂದಿಸಿದರು ಶಿಕ್ಷಕಿ ಚಂದ್ರಾವತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಂಜೆ ನೆಡೆದ ವಾರ್ಷಿಕೋತ್ಸವ ಸಮಾರಂಭದ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡುತ್ತಾ ಈ ಶಾಲೆಯಲ್ಲಿ 160 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದು ಹಳೆ ವಿದ್ಯಾರ್ಥಿಗಳ ಪ್ರಯತ್ನದಿಂದ ಶಾಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯದ ವ್ಯವಸ್ಥೆಯಿಂದ ಕೂಡಿದ್ದು ಈ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ಸರಕಾರಿ ಶಾಲೆಯಾಗಿದೆ.ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ 10ನೇ ತರಗತಿಯಲ್ಲಿ 90% ಅಧಿಕ ಅಂಕ ಪಡೆದ 4 ಜನ ವಿದ್ಯಾರ್ಥಿಗಳನ್ನು ಹಾಗೂ ಇನ್ನಿತರ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿದ್ದೀರಿ,

ಶಿಕ್ಷಣದ ಜೊತೆಯಲ್ಲಿ ಇಲಾಖೆಯಿಂದ ಬರುವ ಕಾರ್ಯಕ್ರಮಗಳೊಂದಿಗೆ ಪ್ರತಿವರ್ಷವು ಈ ಶಾಲೆಯಲ್ಲಿ ವಿಜ್ರಂಭಣೆಯಿಂದ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವುದು ತುಂಬಾ ಖುಷಿಯಾಗಿದೆ. ಉತ್ತಮವಾಗಿರುವ ಈ ಶಾಲೆಗೆ ಮಕ್ಕಳನ್ನು ಸೇರಿಸಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇನ್ನಷ್ಟು ವಿದ್ಯಾರ್ಥಿಗಳ ಸೇರ್ಪಡೆಯೊಂದಿಗೆ ಇನ್ನಷ್ಟು ಬೆಳೆಯಲಿ, ಹಳೆ ವಿದ್ಯಾರ್ಥಿಗಳಿಗೆ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ಹಾಗೂ ಊರಿನ ಎಲ್ಲರಿಗೂ ವೈಯಕ್ತಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು. ಮುಖ್ಯ ಶಿಕ್ಷಕಿ ಮರ್ಲಿ ಮೊಗವೀರ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು, ಶಾಲಾ ಶಿಕ್ಷಕಿ ಸೀತಾಲಕ್ಷ್ಮಿ ಶಾಲಾ ವರದಿ ಓದಿದರು ವಾರ್ಷಿಕೋತ್ಸವದ ಪ್ರಯುಕ್ತ ಹಳೆವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಏರ್ಪಡಿಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು, ಬಹುಮಾನದ ಪಟ್ಟಿಯನ್ನು ದೈಹಿಕ ಶಿಕ್ಷಕ ಚಿತ್ತಾರಂಜನ್ ಹೆಗ್ಡೆ ವಾಚಿಸಿದರು. ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ 90% ಅಧಿಕ ಅಂಕ ಪಡೆದ ಶಾಲಾ ಹಳೆವಿದ್ಯಾರ್ಥಿಗಳು, ಕೊಡುಗೈದಾನಿಗಳು ಮತ್ತು ಪೋಷಕರನ್ನು ಗುರುತಿಸಿ ಅಭಿನಂದಿಸಲಾಯಿತು.
ಪಂಚಾಯತ್ ಅಧ್ಯಕ್ಷರು ಮಾತನಾಡುತ್ತ ನಮ್ಮ ಗ್ರಾಮದಲ್ಲಿ ಇರುವ ಎಲ್ಲಾ ಸರಕಾರಿ ಶಾಲೆಗಳು ಉತ್ತಮ ಪೈಪೋಟಿಯಲ್ಲಿ ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ಎಲ್ಲರೂ ತಮ್ಮ ಮಕ್ಕಳನ್ನು ತಮ್ಮ ಊರಿನಲ್ಲಿರುವ ಸರಕಾರಿ ಶಾಲೆಗೆ ಸೇರಿಸುವುದರ ಮೂಲಕ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸೋಣ ಎಂದು ನುಡಿದರು.
ಬೈಂದೂರು ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಮಹೇಂದ್ರ ಪೂಜಾರಿ ಮಾತನಾಡುತ್ತ ವಾರ್ಷಿಕೋತ್ಸವ ಎನ್ನುವುದು ವಿದ್ಯಾರ್ಥಿಗಳಿಗೆ ಮತ್ತು ಊರಿನವರಿಗೆ ಹಬ್ಬದ ಸಂಭ್ರಮ. ಎಲ್ಲರೂ ಕೈಜೋಡಿಸಿದಾಗ ಮಾತ್ರ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಾಧ್ಯ ಈ ವಿಷಯದಲ್ಲಿ ಕೊಡೇರಿ ಶಾಲೆ ಉತ್ತಮ ಉದಾಹರಣೆಯಾಗಿದೆ. ಶಾಲೆ ಉಳಿಸಿ, ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ದೊಂದಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವಲ್ಲಿನ ಹಳೆವಿದ್ಯಾರ್ಥಿಗಳ ಪ್ರಯತ್ನಕ್ಕೆ ಅಭಿನಂದನೆಗಳು ಎಂದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಕುಂದಾಪುರ ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಹಿರಿಯರು ಕೊಡುಗೈದಾನಿಗಳು ಹಾಗೂ ಶಿಕ್ಷಣ ತಜ್ಞರಾದ ಕೊಡೇರಿ ವಾಸುದೇವ್ ಕಾರಂತ್, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಖಾರ್ವಿ, ಗೀತಾ, ಶಿಕ್ಷಣ ಇಲಾಖೆಯ ಗಣೇಶ್ ಪೂಜಾರಿ, ಸ್ವಸ್ತಿ ವಾಚನಗೈದ ಶೇಖರ್ ಪಿ. ಮೀನುಗಾರರ ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷರಾದ ಚಂದ್ರ ಡಿ. ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಆನಂದ ಪೂಜಾರಿ ಕೊಡೇರಿ, ವಿದ್ಯಾರ್ಥಿ ನಾಯಕ ಸನ್ವಿತ್, ಶಾಲಾಭಿವೃದ್ಧಿ ಸಮಿತಿಯ
ಸದಸ್ಯರು ಹಾಗೂ ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಸ್ವಾತಿ ಭಟ್ ಕಾರ್ಯಕ್ರಮ ನಿರ್ವಹಿಸಿದರೆ. ಶಿಕ್ಷಕಿಯರಾದ ಮಮತಾ, ಸೌಜನ್ಯ ಮತ್ತು ದೇವಿಕಾ, ಹಾಗೂ ಹಳೆವಿದ್ಯಾರ್ಥಿಗಳಾದ ಚಂದ್ರ ಪೂಜಾರಿ, ರವೀಂದ್ರ ಪ್ರಭು, ವಿಜಯ್ ಪೂಜಾರಿ, ಮಂಜುನಾಥ ಖಾರ್ವಿ, ಕೃಷ್ಣ ಖಾರ್ವಿ ಚೌಕಿಮನೆ, ರಾಮ ಪೂಜಾರಿ ಅಳೊಳ್ಳಿ, ಸುಧೀರ್ ಕುಮಾರ್ ಹಾಗೂ ಮತ್ತಿತರರು ಸಹಕರಿಸಿದರು. ನಂತರ ಅಂಗನವಾಡಿ ಪುಟಾಣಿಗಳು ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ, ಸತ್ಯ ಹರಿಶ್ಚಂದ್ರ ನಾಟಕ ಹಾಗೂ ಹಳೆವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮಗಳು ಜರಗಿತು



Related posts

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Mumbai News Desk

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಕರ್ನಾಟಕ SSLC ಫಲಿತಾಂಶ 2026 ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ದ್ವಿತೀಯ ಮತ್ತು ಕಲಬುರಗಿ ಕೊನೆಯ ಸ್ಥಾನ

Mumbai News Desk

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ- ಶ್ರೀಷಾ ಜಯ ಪೂಜಾರಿಗೆ ಶೇ.97.12 ಅಂಕ

Mumbai News Desk