September 6, 2026
Mumbai News Kannada
ಸುದ್ದಿ

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ






ಕರಾವಳಿ ಜಿಲ್ಲೆಗಳ ರೈಲ್ವೆ ಮೇಲ್ದರ್ಜೆಗೇರಿಸಲು 100 ಕೋಟಿ ರೂಪಾಯಿ ಅನುಮೋದನೆ: ಸಂಸದ ಕೋಟ

 ಕರಾವಳಿ ಜಿಲ್ಲೆಗಳ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ₹100 ಕೋಟಿಯ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು ₹2.6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮೂರು ಲಿಫ್ಟ್‌ಗಳನ್ನು ಅಳವಡಿಸಲಾಗುವುದು. ಬಾರಕೂರು-ಮುಲ್ಕಿ ರೈಲ್ವೆ ಪ್ಲಾಟ್ ಫಾರ್ಮ್‌ಗಳನ್ನು ₹4.28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ₹ 105 ಕೋಟಿ ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು.

ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲು ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಲಾಗುವುದು. ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಅದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು.
ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ ಕರಾವಳಿಯ ಜನರಿಗೆ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಭಾಗವಹಿಸಿದ್ದರು.



Related posts

ಕರ್ನಾಟಕ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸನವ್ಯ ಎಸ್ ಗೆ ಶೇ. 97.5 ಅಂಕ

Mumbai News Desk

ಕೊಂಕಣ ರೈಲ್ವೆಯಿಂದ ಮಾನ್ಸೂನ್ ಪೂರ್ವ ಸಿದ್ಧತೆ: ಸುರಕ್ಷಿತ ಪ್ರಯಾಣಕ್ಕಾಗಿ ಹಳಿಗಳ ನವೀಕರಣ ಕಾಮಗಾರಿ ಚುರುಕು, ರೈಲು ಸಂಚಾರ ವಿಳಂಬ ಸಾಧ್ಯತೆ

Mumbai News Desk

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk

ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk