September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಹಳದಿ ಕುಂಕುಮ ಕಾರ್ಯಕ್ರಮ





ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಮಹಿಳಾ ವಿಭಾಗದವರ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು
ದಿನಾಂಕ 18.01. 2026 ರಂದು ಆದಿತ್ಯವಾರ ಸಂಜೆ 4:00 ಗಂಟೆಗೆ ಸರಿಯಾಗಿ ಜರಗಿತು.


ಪ್ರಾರಂಭದಲ್ಲಿ ಗುರುಪೂಜೆ ಗೈದ ನಂತರ ಅತಿಥಿಗಳು ಮತ್ತು ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಹಾಗೂ ಮಹಿಳೆಯರು ದ್ವೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದ ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ಇವರು ವಹಿಸಿದರು.

ಮುಖ್ಯ ಅತಿಥಿಯಾಗಿ ಕುಂದಾಪುರ ಬಿಲ್ಲವ ಸಂಘ (ರಿ )ಮುಂಬೈ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾದ ಶ್ರೀಮತಿ ಸುಶೀಲ ಸುರೇಶ್ ಪೂಜಾರಿ ಮತ್ತು ಚೇತನ ಟ್ಯುಟೋರಿಯಲ್ ನ ಸಂಚಾಲಕಿ ಶ್ರೀಮತಿ ಚೇತನ ಕೋಟ್ಯಾನ್ ರವರು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಸುನೀತ ಪೂಜಾರಿ, ಸುಮಿತ್ರ ಪೂಜಾರಿ ಮತ್ತು ಜ್ಯೋತಿ ಪೂಜಾರಿ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ದೇವಿಕಾ ಸಾಲ್ಯಾನ್ರವರು ಅತಿಥಿಗಳನ್ನು ಸ್ವಾಗತಿಸಿದರು, ಅತಿಥಿಗಳ ಪರಿಚಯವನ್ನು ಶ್ರೀಮತಿ ಸುನಿತ ಪೂಜಾರಿ ಮತ್ತು ಶ್ರೀಮತಿ ಗುಣವತಿ ಪೂಜಾರಿಯವರು ಮಾಡಿದರು. ಪ್ರೇಮ ಪೂಜಾರಿಯವರು ಹಳದಿ ಕುಂಕುಮದ ಮಹತ್ವದ ಬಗ್ಗೆ ಮಾತನಾಡಿದರು, ಅತಿಥಿಗಳ ಭಾಷಣ ಮತ್ತು ಅಧ್ಯಕ್ಷರ ಭಾಷಣದ ನಂತರ ಸುಮಿತ್ರ ಪೂಜಾರಿ ವಂದಿಸಿದರು, ವಿನೋದ ಪೂಜಾರಿಯವರು ಕಾರ್ಯಕ್ರಮವನ್ನು ನಿರೂಪಿಸಿದರು, ವಸಂತಿ ಪೂಜಾರಿಯವರು ದಾನಿಗಳ ಪಟ್ಟಿಯನ್ನು ಓದಿ ಹೇಳಿದರು ತದನಂತರ ಹಳದಿ ಕುಂಕುಮ ಕಾರ್ಯಕ್ರಮ ಜರಗಿತ್ತು .

ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮಹಿಳೆಯರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಗೌರವ ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿ, ಗೌರವ ಕಾರ್ಯದರ್ಶಿ ಜೆ ಜೆ ಕೋಟ್ಯಾನ್, ಕೋಶಾಧಿಕಾರಿ ಆನಂದ ಪೂಜಾರಿ, ಹಾಗೂ ಕೇಂದ್ರ ಕಚೇರಿಯ ಮಹಿಳಾ ವಿಭಾಗದ ಪ್ರತಿನಿಧಿ ಶಾಂತ ಪೂಜಾರಿ ಮತ್ತು ದೇವಕಿ ಕೆ ಸಾಲಿಯಾನ್ ಉಪಸ್ಥಿತರಿದ್ದರು.



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ : ಗುರುಪೂರ್ಣಿಮೆ ಆಚರಣೆ.

Mumbai News Desk

ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ.

Mumbai News Desk

ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ಸಂಯೋಜನೆಯಲ್ಲಿ ಯಕ್ಷಗಾನ ತಾಳಮದ್ದಳೆ,

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ, ನೂತನ ಪದಾಧಿಕಾರಿಗಳ ಆಯ್ಕೆ. ಗೌ.ಅಧ್ಯಕ್ಷರಾಗಿ ಸುರೇಶ್ ಪೂಜಾರಿ, ಅಧ್ಯಕ್ಷರಾಗಿ ಸಿ.ಎ. ಪೂಜಾರಿ ಅಯ್ಕೆ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ಶೈಕ್ಷಣಿಕ ಪ್ರವಾಸ

Mumbai News Desk

ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ* ಶ್ರೀ ರಾಮ*  ಯಕ್ಷಗಾನ

Mumbai News Desk