October 12, 2026
Mumbai News Kannada
ತುಳುನಾಡು

ಹೆಜಮಾಡಿ : ಅದ್ದೂರಿಯಾಗಿ ಜರುಗಿದ ‘ಸ್ತ್ರೀ ಸ್ಫೂರ್ತಿ-2026’ ಕಾರ್ಯಕ್ರಮ



ಮಹಿಳೆಯರು ಸವಾಲುಗಳನ್ನು ಸ್ವೀಕರಿಸುವ ದೃಢ ಮನೋಬಲ ಹೊಂದಿರಬೇಕು – ಶ್ರೀಮತಿ ಶ್ವೇತ ಪಳ್ಳಿ

ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಾವಶ್ಯಕ ಎಂದು ಬಿಲ್ಲವರ ಸಂಘದಲ್ಲಿ ಮಾರ್ಚ್ 17 ರಂದು ನಡೆದ ಸ್ತ್ರೀ ಸ್ಪೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀಮತಿ ಶ್ವೇತ ಪಳ್ಳಿ ಅವರು ಅಭಿಪ್ರಾಯಪಟ್ಟರು.

“ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಹೆಚ್ಚಿನ ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು,” ಎಂದು ಅವರು ತಿಳಿಸಿದರು.

ಹೆಜಮಾಡಿ ಬಿಲ್ಲವರ ಸಂಘದ ಸಹಯೋಗದಲ್ಲಿ ಯುವವಾಹಿನಿ (ರಿ.) ಹೆಜಮಾಡಿ ಘಟಕ, ಮಹಿಳಾ ಮಂಡಳಿ ಬಿಲ್ಲವರ ಸಂಘ ಹಾಗೂ ಬಿರುವೆರ್ ಬ್ರದರ್ಸ್ ಹೆಜಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ವಹಿಸಿದ್ದು ಪ್ರಥಮ ಬಾರಿಗೆ ಹೆಜಮಾಡಿ ಬಿಲ್ಲವರ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸ್ತ್ರೀ ಸ್ಪೂರ್ತಿ 2026 ಕಾರ್ಯಕ್ರಮವನ್ನು ಆಯೋಜಿಸಿದ್ದು ಇಂದಿನ ಆಂಧುನಿಕ ಯುಗದಲ್ಲಿ ಮಹಿಳೆ ಮನೆ ಕೆಲಸಕ್ಕೆ ಮಾತ್ರ ಸೀಮಿತವಾಗಿರದೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನು ತಾವು ತೊಡಗಿಸಿಕೊಳ್ಳುತಿದ್ದಾರೆ.ಇಂತಹ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಗೌರವಿಸಿದರೆ ಇತರ ಮಹಿಳೆಯರಿಗೂ ವಿವಿಧ ಕ್ಷೇತ್ರಗಳಲ್ಲಿ ತನ್ನನು ತೊಡಗಿಸಿಕೊಳ್ಳಲು ಈ ಕಾರ್ಯಕ್ರಮ ಸ್ಪೂರ್ತಿಯಾಗಿರುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು .

ವೇದಿಕೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ಶ್ರೀ ದಯಾನಂದ ಹೆಜಮಾಡಿ, ಯುವವಾಹಿನಿ ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಶ್ರೀ ಸುರೇಶ್ ಪೂಜಾರಿ, ಯುವವಾಹಿನಿ ಅಧ್ಯಕ್ಷರಾದ ಶ್ರೀ ನಿಶಾಂಕ್ ಎಸ್. ಕೋಟ್ಯಾನ್, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಲಾವಣ್ಯ ಪ್ರಮೋದ್ ಹಾಗೂ ಬಿರುವೆರ್ ಬ್ರದರ್ಸ್ ಅಧ್ಯಕ್ಷರಾದ ಶ್ರೀ ಮನೋಜ್ ಸುವರ್ಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕು. ಧನಲಕ್ಷ್ಮಿ ಪೂಜಾರಿ ಅವರಿಗೆ ಸ್ತ್ರೀ ಸ್ಪೂರ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಬಿಲ್ಲವರ ಸಂಘದ ನಾಲ್ಕು ಕರೆಯ ನಾಲ್ವರು ಹಿರಿಯ ಮಹಿಳೆಯರನ್ನು ಸನ್ಮಾನಿಸಲಾಯಿತು.

ಶ್ರೀಮತಿ ನಳಿನಿ ಉಷಾನಂದ ಅವರು ಪ್ರಸ್ತಾವನೆ ಮಾಡಿದರು. ಲಾವಣ್ಯ ಪ್ರಬೋಧ್ ಚಂದ್ರ ಸ್ವಾಗತಿಸಿದರು. ಧೀರಜ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಪ್ತಿ ಆರ್. ಸುವರ್ಣ ವಂದಿಸಿದರು.



Related posts

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk

ಮುದ್ರಾಡಿ ಪ್ರೌಢಶಾಲೆ: ಉತ್ತಮ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವ , ನಿವೃತ್ತ ಮುಖ್ಯ ಶಿಕ್ಷಕಿಗೆ ಸಮ್ಮಾನ

Mumbai News Desk

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕಾಪು ವಲಯ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆಯ್ಕೆ

Mumbai News Desk

ಉಡುಪಿ : ತೆಂಕನಿಡಿಯೂರು ಹಿಂದೂ ಯುವ ಸೇನೆ ಗಣೇಶೋತ್ಸವದ ರಜತ ಮಹೋತ್ಸವ ಸಮಾರೋಪ

Mumbai News Desk

ಕಿನ್ನಿಮುಲ್ಕಿ: ಕನ್ನರ್ಪಾಡಿಯಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅದ್ದೂರಿ ಆಯೋಜನೆ

Mumbai News Desk