July 23, 2026
Mumbai News Kannada
ಸುದ್ದಿ

ಬಂಟ್ವಾಳ : ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಹಿರಿಯ ಕಲಾವಿದ, ಗೋವಿಂದ ಭಟ್‌ ಅಸ್ತಂಗತ







ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಆಟ-ಕೂಟಗಳ ಸರದಾರ, ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಕೆ.ಗೋವಿಂದ ಭಟ್ (90) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ‌ ನಿವಾಸದಲ್ಲಿ ನಿಧನ ಹೊಂದಿದರು. ಅವರು ಮೂವರು ಪುತ್ರರನ್ನು ಅಗಲಿದ್ದಾರೆ.

ಯಕ್ಷಗಾನ ಕ್ಷೇತ್ರದ ‘ನಡೆದಾಡುವ ವಿಶ್ವಕೋಶ’, ‘ದಶಾವತಾರಿ’ ಎಂದೇ ಖ್ಯಾತರಾಗಿದ್ದ ಗೋವಿಂದ ಭಟ್ ತೆಂಕುತಿಟ್ಟು ಯಕ್ಷಗಾನ ಇದುವರೆಗೆ ಕಂಡ ಸರ್ವಶ್ರೇಷ್ಠ ಕಲಾವಿದರು ಎನಿಸಿಕೊಂಡಿದ್ದರು. ಅವರು ಯಕ್ಷಗಾನ ಗುರುಗಳೂ ಆಗಿದ್ದರು.
ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 70 ವರ್ಷ ಸೇವೆ ಸಲ್ಲಿಸಿದ ಇವರು, ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಮುಖ ಕಲಾವಿದರಾಗಿ, ಒಂದೇ ಮೇಳದಲ್ಲಿ 54 ವರ್ಷಗಳಿಗೂ ಹೆಚ್ಚು ಕಾಲ ತಿರುಗಾಟ ನಡೆಸಿ ದಾಖಲೆ ಮೆರೆದವರು. ಜೊತೆಗೆ ಮೂಲ್ಕಿ, ಕೂಡ್ಲು, ಸುರತ್ಕಲ್ (ಕೆಳಗಿನ ಮಾರಿಗುಡಿ) ಇರಾ ಸೋಮನಾಥೇಶ್ವರ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.

ಮಣಿಮೇಖನೆ, ಕಾವೇರಿ ಮಹಾತ್ಮ, ಮೂರುವರೆ ವಜ್ರಗಳು, ರಾಜಶೇಖರ ವಿಲಾಸ, ಮಹಾವೀರ ಸಾಮ್ರಾಟ ಅಶೋಕ, ನಹುಷೇಂದ್ರ ಪ್ರಸಂಗಗಳನ್ನು ಅವರು ರಚಿಸಿದ್ದಾರೆ. ಗೋವಿಂದ ಭಟ್ ಅವರು ವಿಶೇಷವಾಗಿ ರಕ್ತಬೀಜ, ಇಂದ್ರಜಿತ್, ಭೀಷ್ಮ, ಕೌರವ ಮುಂತಾದ ನಾನಾ ಪಾತ್ರಗಳ ಮೂಲಕ ಮನೆಮಾತಾಗಿದ್ದಾರೆ.

ಛಂದೋಬದ್ಧವಾದ ಮಾತಿನ ಜತೆಗೆ ನೃತ್ಯದಲ್ಲೂ ಪ್ರಾವೀಣ್ಯ ಪಡೆದಿದ್ದರು. ಅವರಿಗೆ 2008ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತ್ ಪುರಸ್ಕಾರ, ಕರ್ನಾಟಕ ಜಾನಪದ ಅಕಾಡೆಮಿ ಸಾಧನಾ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಗೌರವ ಸನ್ಮಾನಗಳು ದೊರೆತಿವೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk

ರಾಹುಲ್ ಗಾಂಧಿ ಅವರಿಂದ ಸಂಸತ್ತಿನ ಶಿಷ್ಟಾಚಾರ ಉಲ್ಲಂಘನೆ ಆರೋಪ: 200ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳಿಂದ ಕ್ಷಮೆಯಾಚನೆಗೆ ಆಗ್ರಹ

Mumbai News Desk

ಗುಜರಾತ್ ಭರುಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಅದ್ದೂರಿಯ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ.

Mumbai News Desk

ಅನಿತಾ ಪಿ. ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ

Mumbai News Desk

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk