September 6, 2026
Mumbai News Kannada
ಪ್ರಕಟಣೆ

ಎ. 5 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿವತಿಯಿಂದ ಹಸಿರುವಾಣಿ ಹೊರೆಕಾಣಿಕೆ ಪೂರ್ವಭಾವಿ ಸಮಾಲೋಚನಾ ಸಭೆ





ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಹಸಿರುವಾಣಿ ಹೊರೆ ಕಾಣಿಕೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರಮುಖ ಸಭೆಯು ಬರುವ ಏಪ್ರಿಲ್ 05, 2026ನೇ ಆದಿತ್ಯವಾರ ಸಂಜೆ 3.30 ಗಂಟೆಗೆ ಪಡುಬಿದ್ರಿಯ ಬಂಟರ ಸಂಘದಲ್ಲಿ ನಡೆಯಲಿದೆ. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಹಾಗೂ ಹೊರೆ ಕಾಣಿಕೆ ಮೆರವಣಿಗೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ವೈಭವಯುತವಾಗಿ ನಡೆಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು.
ಈ ಕಾರ್ಯಕ್ರಮದ ಯಶಸ್ಸಿಗಾಗಿ ಸಮಸ್ತ ಸಮಾಜದ ಬಂಧುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಧಾರ್ಮಿಕ ಕೇಂದ್ರಗಳ ಪ್ರತಿನಿಧಿಗಳು ಹಾಗೂ ಭಜನಾ ಮಂಡಳಿಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೊರೆಕಾಣಿಕೆ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ವತಿಯಿಂದ ವಿನಂತಿಸಲಾಗಿದೆ. ಭಗವದ್ಭಕ್ತರೆಲ್ಲರೂ ಈ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Related posts

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ

Mumbai News Desk

ಶ್ರೀ ಜ್ವಾಲಾ ಮಹಾಮ್ಮಾಯಿ – ಕಾಲ ಭೈರವ ದೇವಸ್ಥಾನ ಅಲಂಗಾರು, ಮರೋಳಿ, ಮಂಗಳೂರು : ಫೆ 21ರಿಂದ ಪ್ರತಿಷ್ಠಾ ಮಹೋತ್ಸವ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ

Mumbai News Desk