September 6, 2026
Mumbai News Kannada
ಪ್ರಕಟಣೆ

ಎ. 12ರಂದು ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸಮ್ಮಾನ






ಮುಂಬಯಿ, ಎ. 10: ಶ್ರೀ ರಾಮಾಭಿವಂದ್ಯ ಯಕ್ಷಸೇವಾ ಬಳಗ ಮುಂಬಯಿ ವತಿಯಿಂದ ಹಾಗೂ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಯುಕ್ತ ಆಯೋಜನೆಯಲ್ಲಿ, ಪ್ರಭು ಶ್ರೀ ರಾಮಚಂದ್ರದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ – ‘ಶ್ರೀ ರಾಮ ಕಥಾ ಹೃದಯಂ’ ಪುಣ್ಯಪ್ರದ ಇಪ್ಪತ್ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಐದನೆಯ ಪ್ರಸ್ತುತಿ ‘ಪಾದುಕಾ ಪ್ರದಾನ – ಪಂಚವಟಿ’ ತಾಳಮದ್ದಳೆ ಮತ್ತು ಸಮ್ಮಾನ ಕಾರ್ಯಕ್ರಮವು ಎ. 12ರಂದು ಅಪರಾಹ್ನ 2.15ರಿಂದ ವಿದ್ಯಾವಿಹಾರ್ ಪಶ್ಚಿಮದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.


​ಮಂದಿರದ ಪ್ರಧಾನ ಅರ್ಚಕ ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದಗಳೊಂದಿಗೆ ಹಾಗೂ ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ ಶೆಟ್ಟಿ ಅವರ ಸಹಕಾರದೊಂದಿಗೆ ನಡೆಯಲಿರುವ ಕಾರ್ಯಕ್ರಮದಲ್ಲಿ, ನವೋದಯ ಕನ್ನಡ ಸೇವಾ ಸಂಘ ಥಾಣೆ ಇವರಿಂದ ಶ್ರೀ ರಾಮ ಸಂಕೀರ್ತನೆ ನಡೆಯಲಿದೆ. ಇದೇ ಸಂದರ್ಭದಲ್ಲಿ ದಶಕಗಳ ಕಾಲದಿಂದ ಯಕ್ಷಮಾತೆಯ ಸೇವೆಗೈಯುತ್ತಿರುವ ನಾರಾಯಣ ಕಿಂಞಣ್ಣ ಶೆಟ್ಟಿ ಕುಂಬಳೆ ದಂಪತಿಯನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುವುದು.


​ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಶಾಸ್ತ ಭಕ್ತ ವೃಂದದ ಅಧ್ಯಕ್ಷ ರಾಮಣ್ಣ ದೇವಾಡಿಗ ಹಾಗೂ ತಾಳಮದ್ದಳೆ ಅರ್ಥದಾರಿ, ಕಲಾ ಪೋಷಕ ಕೆ. ಕೆ. ಶೆಟ್ಟಿ ಅವರು ಆಗಮಿಸಲಿದ್ದಾರೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಯೋಜಕರಾದ ಯಕ್ಷಗಾನ ಕಲಾವಿದ, ಅರ್ಥದಾರಿಗಳಾದ ವಾಸು ಮಾರ್ನಾಡ್ ಮತ್ತು ಸುರೇಶ್ ನಂದೊಳ್ಳಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.




Related posts

ಡೊಂಬಿವಲಿ: ಮಾರ್ಚ್ 17 (ನಾಳೆ) ಅನುಜಾ ಮಹಿಳಾ ಸಂಸ್ಥೆಯ 45ನೇ ವಾರ್ಷಿಕೋತ್ಸವ

Mumbai News Desk

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ಡಿ. 21ರಂದು ಅಂಧೇರಿಯಲ್ಲಿ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ನೇತೃತ್ವದ 37ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಅ. 5ಕ್ಕೆ : ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಯಿ ತಾಲೂಕ ಮೊಗವೀರ ಸಂಘದಿಂದ, ವಸಯಿಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಪ :ಜ. 18ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಪರಿವಾರ ದೇವತೆಗಳಿಗೆ ದೀಪಾರಾಧನೆ.

Mumbai News Desk