September 6, 2026
Mumbai News Kannada
ಪ್ರಕಟಣೆ

ಬಿಲ್ಲವರ ಅಸೋಸಿಯೇಷನ್ ಮುಂಬಯಿ: ಎ. 18ರಂದು 2025ನೇ ಸಾಲಿನ ‘ಶ್ರೀ ಗುರುನಾರಾಯಣ ಪ್ರಶಸ್ತಿ’ ಶ್ರೀ ಗುರುನಾರಾಯಣ ಯಕ್ಷಗಾನ ಕಲಾ ಪ್ರಶಸ್ತಿ ಪ್ರದಾನ ಸಮಾರಂಭ





ಮುಂಬಯಿಯ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆಯಾದ ಬಿಲ್ಲವರ ಅಸೋಸಿಯೇಷನ್ ವತಿಯಿಂದ 2025ರ ಸಾಲಿನ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಶ್ರೀ ಗುರುನಾರಾಯಣ ಯಕ್ಷಗಾನ ಕಲಾ ಪ್ರಶಸ್ತಿ’ ಪ್ರದಾನ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಲಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಏಪ್ರಿಲ್ 18 2026ರ ಶನಿವಾರ ಸಂಜೆ 3.30ಕ್ಕೆ ಸಾಂತಾಕ್ರೂಜ್ ಪೂರ್ವದಲ್ಲಿರುವ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನೆರವೇರಲಿದೆ. ಈ ವರ್ಷದ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಕರ್ನಾಟಕ ಮಲ್ಲ ಪತ್ರಿಕೆಯ ಉಪಸಂಪಾದಕರಾದ ಶ್ರೀನಿವಾಸ ಜೋಕಟ್ಟೆ ಅವರು ಆಯ್ಕೆಯಾಗಿದ್ದರೆ, ಯಕ್ಷಗಾನ ಕಲಾ ಪ್ರಶಸ್ತಿಗೆ ಉಡುಪಿ ಎಂ ಜಿ ಎಂ ಯಕ್ಷಗಾನ ಕೇಂದ್ರದ ಮಾಜಿ ಪ್ರಾಂಶುಪಾಲರಾದ ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ಅವರು ಪಾತ್ರರಾಗಿದ್ದಾರೆ.
ಸಂಸ್ಥೆಯ ಅಧ್ಯಕ್ಷರಾದ ಹರೀಶ್ ಜಿ. ಅಮೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಕೃತ ವಿದ್ವಾಂಸರಾದ ಡಾ. ಎಸ್. ಕೆ. ಭವಾನಿ ಮತ್ತು ಗೌರವ ಅತಿಥಿಗಳಾಗಿ ಮುಂಬಯಿ ಬಂಟ್ಸ್ ಸಂಘದ ಗೌರವ ಪ್ರಧಾನ ಕಾರ್ಯದರ್ಶಿಗಳಾದ ಡಾ. ಆರ್. ಕೆ. ಶೆಟ್ಟಿ ಅವರು ಆಗಮಿಸಲಿದ್ದಾರೆ. ಉದ್ಯಮಿ ವಿನಯ್ ಎಂ. ಕುಕ್ಯಾನ್ ಮತ್ತು ಭಾರತ್ ಕೋ. ಆಪರೇಟಿವ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಅವರು ಪ್ರಶಸ್ತಿಗೆ ಪ್ರಾಯೋಜಕತ್ವದ ನೆರವು ನೀಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಹಿಳಾ ವಿಭಾಗದ ಸದಸ್ಯರಿಂದ ‘ನೃತ್ಯ ವೈಭವ’ ಪ್ರದರ್ಶನಗೊಳ್ಳಲಿದೆ.
ಬಿಲ್ಲವರ ಅಸೋಸಿಯೇಷನ್‌ನ ಗೌರವ ಅಧ್ಯಕ್ಷ ಎಲ್. ವಿ. ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್, ಗೌರವ ಪ್ರಧಾನ ಕೌಶಾಧಿಕಾರಿ ರವಿ ಎಸ್. ಸನಿಲ್ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ. ಕೋಟ್ಯಾನ್, ಅಕ್ಷಯ ಸಂಪಾದಕ ಮಂಡಳಿಯ ಡಾ. ಈಶ್ವರ ಅಲೆವೂರು, ನಿರ್ವಾಹಕ ಸಂಪಾದಕ ಹರೀಶ್ ಜಿ. ಪೂಜಾರಿ ಕೊಕ್ಕರ್ಣೆ ಹಾಗೂ ಸಾಂಸ್ಕೃತಿಕ ಉಪಸಮಿತಿಯ ಕಾರ್ಯಾಧ್ಯಕ್ಷ ನವೀನ್ ಪಡು ಇನ್ನಾ,ಗೌರವ ಕಾರ್ಯದರ್ಶಿ ಜಿ. ಕೆ. ಕೆಂಚನಕೆರೆ ಅವರು ಈ ಮಹತ್ವದ ಸಾಂಸ್ಕೃತಿಕ ಸಂಜೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಮಸ್ತ ಕಲಾಭಿಮಾನಿಗಳನ್ನು ಮತ್ತು ಸಮಾಜ ಬಾಂಧವರಿಗೆ ಆದರದ ಸ್ವಾಗತ ಬಯಸಿದ್ದಾರೆ.



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಲಿ ಜ.4 ರಂದು  ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕೊಡೇರಿ: ನವೆಂಬರ್ 21ರಂದು ಕೊಡೇರಿಯಲ್ಲಿ ಹಕ್ರೆಮಠ ಶ್ರೀ ಜೈನಜಟ್ಟಿಗೇಶ್ವರ ದೇವರ 79ನೇ ವರ್ಷದ ಕಂಬಳೋತ್ಸವ

Mumbai News Desk

ಸಾಂತಾಕ್ರೂಜ್ ಪೇಜಾವರ ಮಠ : ಡಿ. 23ಕ್ಕೆ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರನೇ ವರ್ಷದ ಸಮಾರಾಧನೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk