30 C
Mumbai
September 26, 2026
Mumbai News Kannada
ಕರ್ನಾಟಕ

ಸಚಿವ ಡಿ. ಸುಧಾಕರ್ ನಿಧನ: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖಿಕ ಸಚಿವ ಇನ್ನಿಲ್ಲ



ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕರೂ ಆಗಿದ್ದ ಡಿ. ಸುಧಾಕರ್ (66) ಅವರು ಇಂದು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರಂಭದಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ, ಶಸ್ತ್ರಚಿಕಿತ್ಸೆಯ ನಂತರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಐಸಿಯುನಲ್ಲಿ ಇರಿಸಲಾಗಿತ್ತು. ಆದರೆ, ಇಂದು ಮುಂಜಾನೆ ಸುಮಾರು 3:15ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸುಧಾಕರ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿವಿಧ ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಹಿರಿಯೂರು ಕ್ಷೇತ್ರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಿ, ಬಳಿಕ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಒಬ್ಬ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಿರುವ ಹಿರಿಯೂರು ಕ್ಷೇತ್ರದ ಜನತೆ ಕಂಬನಿ ಮಿಡಿದಿದ್ದಾರೆ.



Related posts

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಸುಶ್ಮಿತಾ ಯು ಪೂಜಾರಿ ಗೆ ಶೇ.99.20 ಅಂಕ

Mumbai News Desk

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ -2025ಕೆ ಎಸ್ ರಾವ್ ಸ್ಮಾರಕ ಸರಕಾರಿ ಪ್ರೌಢಶಾಲೆ ಚಿತ್ರಾಪು, ಮುಲ್ಕಿ ವಿದ್ಯಾರ್ಥಿಗಳ ಸಾಧನೆ

Mumbai News Desk

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತ: ಉಪಹಾರ ಸಭೆಯಲ್ಲಿ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ

Mumbai News Desk