32 C
Mumbai
September 29, 2026
Mumbai News Kannada
ಸುದ್ದಿ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪದಪ್ರದಾನ



ಪಡುಬಿದ್ರಿ: “ಭಿನ್ನಾಭಿಪ್ರಾಯಗಳನ್ನು ಮರೆತು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಇಂದಿನಿಂದಲೇ ಸಿದ್ಧತೆ ಆರಂಭಿಸಬೇಕು,” ಎಂದು ಕಾಂಗ್ರೆಸ್ ಪಕ್ಷದ ಪ್ರಚಾರ ಸಮತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಹೆಜಮಾಡಿ ಬಿಲ್ಲವರ ಸಂಘದಲ್ಲಿ ಭಾನುವಾರ ಹೆೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷ ಪ್ರಭೋದ್‌ಚಂದ್ರ ಹೆಜಮಾಡಿ ಹಾಗೂ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಪಕ್ಷದ ಬಲವರ್ಧನೆಯೇ ನಮ್ಮ ಗುರಿಯಾಗಬೇಕು. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ನಿಜವಾದ ಆಸ್ತಿ ಮತ್ತು ಶಕ್ತಿ. ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿಯಿಂದ ಕೆಲಸ ಮಾಡುವ ಮೂಲಕ ಸರ್ಕಾರದ ಜನಪರ ಯೋಜನೆಗಳನ್ನು ಮತ್ತು ಗ್ಯಾರಂಟಿ ಯೋಜನೆಗಳನ್ನು ಹಳ್ಳಿಯ ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಫಲಾನುಭವಿಗಳಿಗೆ ಸರಿಯಾದ ಮಾಹಿತಿ ನೀಡಿ, ಅರ್ಹರಿಗೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ ಸಭಾಧ್ಯಕ್ಷತೆ ವಹಿಸಲಿದ್ದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ದಕ್ಷಿಣದ ಅಧ್ಯಕ್ಷ ವೈ. ಸುಕುಮಾರ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠನ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕೆಪಿಸಿಸಿ ಕೋ ಆರ್ಡಿನೇಟರ್‌ಗಳಾದ ನವೀನ್‌ಚಂದ್ರ ಜೆ. ಶೆಟ್ಟಿ ಅಬ್ದುಲ್ ಅಝೀಜ್ ಹೆಜಮಾಡಿ, ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ಧಾರಗ ಆಲಡೆಯ ಆಡಳಿತ ಮೊಕ್ತೇಸರ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹರಿಪ್ರಸಾದ್ ರೈ, ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೆಜಮಾಡಿ, ದೀಪಕ್ ಕುಮಾರ್ ಎರ್ಮಾಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ರಾಜೇಶ್ ರಾವ್ ಪಾಂಗಾಳ, ಉದ್ಯಮಿ ರಾಲ್ಫಿ ಡಿ’ಕೋಸ್ಟ, ಎಚ್. ಪರಮೇಶ್ವರ್, ವಿಕ್ರಮ್ ರಾಜ್, ಶೇಖಬ್ಬ ಕೋಟೆ, ಕಾಪು ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷ ನಿಯಾಝ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್, ಜಗದೀಶ್ ಆಚಾರ್ಯ ಪಡುಬಿದ್ರಿ, ರಾಜು ಎಚ್., ಸಂಜೀವ ಟಿ., ನಿರ್ಮಲಾ ಹೆಜಮಾಡಿ ಉಪಸ್ಥಿತರಿದ್ದರು.ಶೇಖರ್ ಹೆಜಮಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮೀಣ ಕಾಂಗ್ರೆಸ್ ಕಾರ್ಯದರ್ಶಿ ಕೇಶವ್ ಸಾಲ್ಯಾನ್ ವಂದಿಸಿದರು. ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.



Related posts

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ: ಕನ್ನಡ ಚಿತ್ರರಂಗದ ಕಿರೀಟಕ್ಕೆ ಮತ್ತೊಂದು ಗರಿ

Mumbai News Desk

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಸ್ನೇಹ ಶಿವಪ್ಪ ಮೊಗವೀರ ಉತ್ತೀರ್ಣ

Mumbai News Desk

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk

ಮೂಲತ್ವದ ಬೆಳಕಿನಲ್ಲಿ ಅಕ್ಷರ ಕ್ರಾಂತಿ: ಸ್ಕಾಲರ್‌ಶಿಪ್ ಮಾಸ್ಟರ್ ಕೆ. ನಾರಾಯಣ ನಾಯಕ್‌ಗೆ ‘ಮೂಲತ್ವ ವಿಶ್ವ ಪ್ರಶಸ್ತಿ’ಯ ಗೌರವ

Mumbai News Desk

ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ

Mumbai News Desk