October 12, 2026
Mumbai News Kannada
ಸುದ್ದಿ

ಮುಂಬೈ – ಮಂಗಳೂರು ನಡುವೆ ಹೊಸ ರೈಲು ಹಾಗೂ ವಂದೇ ಭಾರತ್ ಸ್ಲೀಪರ್ ಕೋಚ್‌ಗೆ ಆಗ್ರಹಿಸಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮನವಿ ಸಲ್ಲಿಕೆ



ಕರಾವಳಿ ಕರ್ನಾಟಕ ಮತ್ತು ವಾಣಿಜ್ಯ ನಗರಿ ಮುಂಬೈ ನಡುವಿನ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾ ತಂಡವು ಇಂದು ಒಂದು ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಮುಂಬೈ – ಮಂಗಳೂರು – ಮುಂಬೈ ಮಾರ್ಗದಲ್ಲಿ ಮತ್ತೊಂದು ನಿಯಮಿತ (ರೆಗ್ಯುಲರ್) ರೈಲು ಹಾಗೂ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ಕೋಚ್ ರೈಲನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಗುರುಪುರದ ಜಂಗಮ ಮಠದಲ್ಲಿ ಗೌರವಾನ್ವಿತ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಸಮಿತಿಯ ವತಿಯಿಂದ ಅಧಿಕೃತವಾಗಿ ಮನವಿ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರು, ಜಿಲ್ಲಾ ಅಧ್ಯಕ್ಷರು, ರಾಜ್ಯ ಸಂಯೋಜಕರು ಹಾಗೂ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಅವರು ಉಪಸ್ಥಿತರಿದ್ದು ಪ್ರಸ್ತಾವನೆಗೆ ಬಲ ತುಂಬಿದರು. ಜಂಗಮ ಮಠ ಮತ್ತು ವಜ್ರದೇಹಿ ಮಠದ ಪೂಜ್ಯ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖ ನಾಗರಿಕರು ಹಾಗೂ ಸಮಿತಿಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕರಾವಳಿಯ ಜನರ ಈ ನ್ಯಾಯಸಮ್ಮತ ಬೇಡಿಕೆಗೆ ಧ್ವನಿಯಾದರು.
ಮನವಿಯನ್ನು ಅತ್ಯಂತ ಸಕಾರಾತ್ಮಕವಾಗಿ ಸ್ವೀಕರಿಸಿದ ಮಾನ್ಯ ರೈಲ್ವೆ ಸಚಿವರಾದ ವಿ. ಸೋಮಣ್ಣ ಅವರು, ಈ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಮಾರ್ಗದರ್ಶನದಲ್ಲಿ ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಂಗಳೂರು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಈ ಯೋಜನೆಯು ಸಾಕಾರಗೊಂಡಲ್ಲಿ ಮುಂಬೈ ಮತ್ತು ಮಂಗಳೂರು ನಡುವೆ ಪ್ರಯಾಣಿಸುವ ಸಾವಿರಾರು ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅತ್ಯಾಧುನಿಕ ಮತ್ತು ವೇಗದ ರೈಲು ಸೇವೆ ಲಭ್ಯವಾಗಲಿದ್ದು, ಈ ಯಶಸ್ವಿ ಪ್ರಯತ್ನಕ್ಕಾಗಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯ ಮುಂಬೈ ಮತ್ತು ಜಿಲ್ಲಾ ತಂಡಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ; ಅಪಾಯದಿಂದ ಪಾರು

Mumbai News Desk

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ

Chandrahas

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ದಿ .ಜಯಂತ್ ಪಡುಬಿದ್ರಿ ಸಂಸ್ಮರಣೆ

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk