September 6, 2026
Mumbai News Kannada
ತುಳುನಾಡು

ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ





ಲಯನ್ಸ್ ಕ್ಲಬ್ ಮೂಲ್ಕಿ, ಸಿ.ಎಸ್.ಐ ಆಂಗ್ಪಮಾಧ್ಯಮ ಶಾಲೆ ಮತ್ತು ಕರ್ನಾಟಕ ಅರಣ್ಯ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ ಕಾರ್ನಾಡು ಸಿ.ಎಸ್.ಐ ಆಂಗ್ಪ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಮೂಲ್ಕಿಯ ಯುವ ವಕೀಲೆ ಕು. ಸಮೀಕ್ಷಾ ಭಾಸ್ಕರ ಹೆಗ್ಡೆಯವರು ಸಸಿಯನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ‘ಪ್ರಕೃತಿಯನ್ನು ನಾವು ಉಳಿಸಿದರೆ ನಾವು ಉಳಿದೇವು. ಈಗಿನ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯಕ್ಕೆ ಮನುಷ್ಯನ ಅತಿ ಅಸೆಯೇಕಾರಣವಾಗಿದೆ. ಕೈಗಾರಿಕೆಗಳ ಸಂಖ್ಯೆ ಜಾಸ್ತಿಯಾಗುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ರೋಗಗಳು ಬರುವ ಸಾಧ್ಯತೆ ಇದೆ. ಹಾಗಾಗಿ ಗಿಡಗಳನ್ನು ನೆಟ್ಟು ಶುದ್ಧ, ಆರೋಗ್ಯಪೂರ್ಣ ಪರಿಸರಕ್ಕಾಗಿ ನಾವು ಪ್ರಯತ್ನಿಸೋಣ ಎಂದರು’.

ದೇವರು ನೀಡಿದ ಸುಂದರ ಪ್ರಕೃತಿಯನ್ನು ಉಳಿಸಿ ಬೆಳೆಸೋಣ ಎಂದು ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರ್ಷರಾಯ್ ಶೆಟ್ಟಿ ಜಿ.ಎಂ. ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ರೆ| ಫಾ| ವಿಲಿಯಮ್ ಕುಂದರ್ ವಹಿಸಿದ್ದರು. ಸದಾಶಿವ ಹೊಸದುರ್ಗ, ಸ್ಯಾಮ್ ಮಾಬೆನ್ ಮುಖ್ಯ ಅತಿಥಿಗಳಾಗಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿ ಸುಹಾಸಿನಿ ಸ್ವಾಗತಿಸಿದರು. ಶಾಲಾ ಸಂಚಾಲಕರಾದ ರಂಜನ್ ಜತ್ತನ್ನ ವೇದಿಕೆಯಲ್ಲಿದ್ದರು. ರೇಷ್ಮಾ ಮತ್ತು ಧನ್ಯ ಕಾರ್ಯಕ್ರಮ ನಿರ್ವಹಿಸಿದರು. ಆಶಾ ಧನ್ಯವಾದವಿತ್ತರು.



Related posts

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಉಡುಪಿ ಕಂಬಳ ಶಂಕುಸ್ಥಾಪನೆ: ನಿಷೇಧಾಜ್ಞೆ ಉಲ್ಲಂಘಿಸಿದ ಸಂಸದರು, ಶಾಸಕರು ಸೇರಿ 37 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

Mumbai News Desk

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk

ಗ್ರಾಮದ ಅಭಿವೃದ್ಧಿ ನಮ್ಮಧ್ಯೇಯವಾಗಲಿ : ಕುಸುಮಾ ಚಂದ್ರಶೇಖರ್

Mumbai News Desk

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ.

Mumbai News Desk

  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ  ಹೊರೆ ಕಾಣಿಕೆ   ಸಮರ್ಪಣೆ.

Mumbai News Desk