31 C
Mumbai
September 11, 2026
Mumbai News Kannada
ತುಳುನಾಡು

ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ದೂರು





ಬಿಲ್ಲವ, ಬಂಟ ಸಮುದಾಯ ಹಾಗೂ ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಅಶ್ಲೀಲ ಮತ್ತು ಜಾತಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.

ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ(ರಿ) ಉಡುಪಿ ಘಟಕ ಪದಾಧಿಕಾರಿಗಳು ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿ ಪ್ರಭಾರ ಇನ್ಸೆಕ್ಟರ್ ಮಹೇಶ್ ಪ್ರಸಾದ್‌ ಅವರಿಗೆ ದೂರು ಸಲ್ಲಿಸಿದ್ದಾರೆ. ಅನಿತಾ ಕಾಸರಗೋಡು ಎಂಬ ಮಹಿಳೆಯವರು ಬಿರುವೆ‌ರ್ ಕುಡ್ಲ ಸಂಸ್ಥೆಯ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ. ಅಲ್ಲದೆ ಜಿಲ್ಲೆಯ ಪ್ರಮುಖ ಬಿಲ್ಲವ ಹಾಗೂ ಬಂಟ ಸಮುದಾಯಗಳ ವಿರುದ್ಧವೂ ಜಾತಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಇಂತಹ ಹೇಳಿಕೆಗಳು ಅತ್ಯಂತ ಆಕ್ಷೇಪಾರ್ಹ, ಖಂಡನೀಯವಾಗಿದ್ದು, ಸಂಬಂಧಿತ ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ. ಹಾಗಾಗಿ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಿತ ವ್ಯಕ್ತಿಯ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.



Related posts

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ಕ್ಕೆ ಚಾಲನೆ

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk